ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗದ (ಯುಪಿಎಸ್‌ಸಿ) ಪರೀಕ್ಷೆ ಬರೆಯಲು ‘ಅಂಗವಿಕಲ ಅಭ್ಯರ್ಥಿಯಾಗಿ’ ಅವಕಾಶ ಪಡೆದುಕೊಂಡ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್‌ಗೆ ಮೇ 2ರ ಒಳಗಾಗಿ ದೆಹಲಿ ಪೊಲೀಸರ ಮುಂದೆ ಹಾಜರಾಗುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ, ಸತೀಶ್ ಚಂದ್ರ ಶರ್ಮಾ, ಮೇ 21ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿದ್ದು, ಅಲ್ಲಿಯ ತನಕ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಪೊಲೀಸರಿಗೆ ತಿಳಿಸಿದೆ. ಈ ಪ್ರಕರಣದಲ್ಲಿ ಇದುವರೆಗೂ ಸರಿಯಾದ ತನಿಖೆ ನಡೆದಿಲ್ಲ, ತ್ವರಿತವಾಗಿ ತನಿಖೆ ನಡೆಸಬೇಕು ಎಂದು ದೆಹಲಿ ಪೊಲೀಸರಿಗೆ ನ್ಯಾಯಾಲಯವು ಸೂಚನೆ ನೀಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.