ADVERTISEMENT

ಚುನಾವಣಾ ಬಾಂಡ್‌: ಜನವರಿಯಲ್ಲಿ ‘ಸುಪ್ರೀಂ’ ವಿಚಾರಣೆ

ಪಿಟಿಐ
Published 4 ಡಿಸೆಂಬರ್ 2019, 15:45 IST
Last Updated 4 ಡಿಸೆಂಬರ್ 2019, 15:45 IST

ನವದೆಹಲಿ: ಚುನಾವಣಾ ಬಾಂಡ್‌ ಯೋಜನೆಗೆ ತಡೆ ನೀಡಬೇಕು ಎಂದು ಕೋರಿ ಸ್ವಯಂ ಸೇವಾ ಸಂಸ್ಥೆ ಎಡಿಆರ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನವರಿಯಲ್ಲಿ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ಎಸ್‌.ಎ.ಬೊಬಡೆ ನೇತೃತ್ವದ ನ್ಯಾಯಪೀಠ ಬುಧವಾರ ಹೇಳಿದೆ.

ಚುನಾವಣಾ ಬಾಂಡ್‌ ಯೋಜನೆ ಮೂಲಕ ರಾಜಕೀಯ ಪಕ್ಷಗಳು ಕೋಟ್ಯಂತರ ರೂಪಾಯಿ ಸಂಗ್ರಹಿಸುತ್ತವೆ. ಇದು ಲಂಚ ಪಡೆಯುವುದು, ಹಣ ಅಕ್ರಮ ವರ್ಗಾವಣೆ ಹಾಗೂ ಕಪ್ಪುಹಣದ ಚಲಾವಣೆಯಂತಹ ಅಪರಾಧ ಕೃತ್ಯಗಳಿಗೆ ಸಮ ಎಂದು ಎಡಿಆರ್‌ ಪರ ವಕೀಲ ಪ್ರಶಾಂತ್‌ ಭೂಷಣ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT