ADVERTISEMENT

ಅಲ್ಪಸಂಖ್ಯಾತ ಸಂಸ್ಥೆ ಸ್ಥಾನಮಾನ: ಪರಿಶೀಲನೆಗೆ ‘ಸುಪ್ರೀಂ’ ಸಮ್ಮತಿ

ಪಿಟಿಐ
Published 6 ಅಕ್ಟೋಬರ್ 2022, 16:17 IST
Last Updated 6 ಅಕ್ಟೋಬರ್ 2022, 16:17 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ನಡೆಸುತ್ತಿರುವ ಶಿಕ್ಷಣ ಸಂಸ್ಥೆಗೆ ಅಲ್ಪಸಂಖ್ಯಾತ ಸಂಸ್ಥೆಯ ಸ್ಥಾನಮಾನ ನೀಡಬೇಕೆ, ಬೇಡವೆ ಎಂಬುದರ ಕುರಿತು ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್‌ ಗುರುವಾರ ಸಮ್ಮತಿ ಸೂಚಿಸಿದೆ.

ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ಉತ್ತರಪ್ರದೇಶ ಸರ್ಕಾರ, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ರಾಷ್ಟ್ರೀಯ ಆಯೋಗ, ರಾಷ್ಟ್ರೀಯ ವೈದ್ಯಕೀಯ ಆಯೋಗ ಹಾಗೂ ಇತರರಿಗೆ ನೋಟಿಸ್‌ ಜಾರಿಗೊಳಿಸಿದೆ.

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವ್ಯಕ್ತಿಗಳ ಆಡಳಿತಕ್ಕೊಳಪಟ್ಟಿರುವ ಶಿಕ್ಷಣ ಸಂಸ್ಥೆಗಳನ್ನು ಅಲ್ಪಸಂಖ್ಯಾತ ಸಂಸ್ಥೆಗಳೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಉತ್ತರಪ್ರದೇಶ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯೊಂದರ ವಿಚಾರಣೆ ನಡೆಸಿದ್ದಅಲಹಾಬಾದ್‌ ಹೈಕೋರ್ಟ್, ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿತ್ತು. ಹೈಕೋರ್ಟ್‌ನ ತೀರ್ಪು ಪ್ರಶ್ನಿಸಿ ಮಹಾಯಾನ ತೇರವಾಡ ವಜ್ರಯಾನ ಬೌದ್ಧ ಧರ್ಮ ಮತ್ತು ಚಾರಿಟಬಲ್‌ ಟ್ರಸ್ಟ್‌, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.