ADVERTISEMENT

ಸ್ವತಂತ್ರ ತನಿಖೆಗೆ ಪಾತಕಿ ಅತೀಕ್‌ ಹತ್ಯೆ ಪ್ರಕರಣ: ಜುಲೈ 3ರಂದು ವಿಚಾರಣೆ

ಪಿಟಿಐ
Published 28 ಜೂನ್ 2023, 16:52 IST
Last Updated 28 ಜೂನ್ 2023, 16:52 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಪೊಲೀಸ್‌ ವಶದಲ್ಲಿದ್ದ ಪಾತಕಿ, ರಾಜಕಾರಣಿ ಅತೀಕ್‌ ಅಹ್ಮದ್‌ ಮತ್ತು ಅವರ ಸಹೋದರ ಆಶ್ರಫ್‌ ಹತ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒಪ್ಪಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಜುಲೈ 3ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್‌ ತಿಳಿಸಿದೆ.

ನ್ಯಾಯಮೂರ್ತಿಗಳಾದ ಎಸ್‌.ಆರ್‌. ಭಟ್‌ ಮತ್ತು ಅರವಿಂದ್‌ ಕುಮಾರ್‌ ಅವರು ಈ ಅರ್ಜಿಯ ವಿಚಾರಣೆ ನಡೆಸಲಿದ್ದಾರೆ ಎಂದು ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ. 

ವಕೀಲ ವಿಶಾಲ್‌ ತಿವಾರಿ ಅವರು ಈ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೇ, 2017ರಿಂದ ಇಲ್ಲಿಯವರೆಗೆ ಉತ್ತರ ಪ್ರದೇಶದಲ್ಲಿ ಪೊಲೀಸರು ನಡೆಸಿರುವ 183 ಎನ್‌ಕೌಂಟರ್‌ ಕುರಿತೂ ತನಿಖೆ ನಡೆಸುವಂತೆ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.