ADVERTISEMENT

ಎಐಡಿಎಂಕೆ ಏಕ ನಾಯಕತ್ವ: 6ಕ್ಕೆ ‘ಸುಪ್ರೀಂ’ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 12:19 IST
Last Updated 4 ಜುಲೈ 2022, 12:19 IST
ಎಡಪ್ಪಾಡಿ ಕೆ ಪಳನಿಸ್ವಾಮಿ
ಎಡಪ್ಪಾಡಿ ಕೆ ಪಳನಿಸ್ವಾಮಿ   

ನವದೆಹಲಿ (ಪಿಟಿಐ): ಪಕ್ಷದ ಏಕ ನಾಯಕತ್ವ ವಿಷಯಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಜುಲೈ 6 ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.

ಎಐಎಡಿಎಂಕೆ ಕಾರ್ಯಕಾರಿಣಿ ಸಭೆಯಲ್ಲಿ ಅಘೋಷಿತ ನಿರ್ಣಯಗಳನ್ನು ಅಂಗೀಕರಿಸದಂತೆ ಮದ್ರಾಸ್ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಇಪಿಎಸ್‌ ಅರ್ಜಿ ಸಲ್ಲಿಸಿದ್ದಾರೆ.ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಜೆ.ಕೆ.ಮಹೇಶ್ವರಿ ಅವರಿದ್ದ ರಜಾಕಾಲದ ಪೀಠವು, 6ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.

ಇಪಿಎಸ್ ಬಣ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ಎಸ್.ವೈದ್ಯನಾಥನ್, ಹೈಕೋರ್ಟ್ ವಿಭಾಗೀಯ ಪೀಠವು ಮಧ್ಯರಾತ್ರಿ ವರೆಗೂ ಕಲಾಪ ನಡೆಸಿ, ಜೂನ್ 23 ರ ಬೆಳಿಗ್ಗೆ 4 ಗಂಟೆಗೆ ಆದೇಶ ನೀಡಿದೆ. ಯಾವುದೇ ಅಘೋಷಿತ ನಿರ್ಣಯ ತೆಗೆದುಕೊಳ್ಳದಂತೆ ನೀಡಿರುವ ಆದೇಶವು ಪಕ್ಷದ ಆಂತರಿಕ ಕಾರ್ಯಚಟುವಟಿಕೆಗೆ ಅಡ್ಡಿಪಡಿಸುತ್ತದೆ ಎಂದು ಹೇಳಿದರು.

ADVERTISEMENT

ಪಕ್ಷದ ಸಂಯೋಜಕ ಒ. ಪನ್ನೀರಸೆಲ್ವಂ ಬಣದ ವಕೀಲರು ತುರ್ತು ವಿಚಾರಣೆಯ ಮನವಿಯನ್ನು ವಿರೋಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.