ನವದೆಹಲಿ: ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ದೂರು ಸ್ವೀಕರಿಸುವ ಬಗ್ಗೆ ಲೋಕಪಾಲ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಮಾ.18ರಂದು ನಡೆಸಲಿದೆ.
ಈ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಸೂರ್ಯಕಾಂತ ಮತ್ತು ಅಭಯ್ ಎಸ್. ಓಕಾ ಅವರ ಪೀಠವು ವಿಚಾರಣೆ ನಡೆಸಲಿದೆ. ದೂರು ಸ್ವೀಕರಿಸುವ ಬಗ್ಗೆ ಲೋಕಪಾಲವು ಜ.27ರಂದು ಆದೇಶ ಹೊರಡಿಸಿತ್ತು.
‘ಇದು ಬಹಳ ಚಿಂತೆಗೀಡು ಮಾಡುವಂಥದ್ದು’ ಎಂದು ಅಭಿಪ್ರಾಯಪಟ್ಟಿದ್ದ ಸುಪ್ರೀಂ ಕೋರ್ಟ್ ಫೆ.20ರಂದು ಆದೇಶಕ್ಕೆ ತಡೆ ನೀಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸುವಂತೆ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ದೂರು ನೀಡಿದ್ದ ವ್ಯಕ್ತಿಗೆ, ಕೇಂದ್ರ ಸರ್ಕಾರ ಹಾಗೂ ಲೋಕಪಾಲ ರಿಜಿಸ್ಟ್ರಾರ್‌ಗೆ ಕೋರಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.