ನವದೆಹಲಿ: ಪೆಗಾಸಸ್ ಕುತಂತ್ರಾಂಶ ಬಳಸಿ, ಗೂಢಚಾರಿಕೆ ನಡೆಸಿದ ಆರೋಪಗಳ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಆಗ್ರಹಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ (ಸೆ. 13) ನಡೆಸಲಿದೆ.
ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಮೂರು ಸದಸ್ಯರನ್ನು ಒಳಗೊಂಡ ನ್ಯಾಯಪೀಠ ವಿಚಾರಣೆ ನಡೆಸುವುದು.
ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ಅಗತ್ಯ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ತಿಳಿಸಿದ್ದರು. ಈ ವಾದವನ್ನು ಪುರಸ್ಕರಿಸಿದ್ದ ನ್ಯಾಯಪೀಠ, ಪ್ರತಿಕ್ರಿಯೆ ಸಲ್ಲಿಸಲು ಅವಕಾಶ ನೀಡಿ ಸೆ. 7ರಂದು ಆದೇಶಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.