ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಎ.ಜಿ. ಪೆರರಿವಲನ್ ಪೆರೋಲ್ ಅರ್ಜಿಯನ್ನು ಮೂರು ವಾರಗಳ ಬಳಿಕ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.
ಪೆರರಿವಾಲನ್ ಪರ ವಕೀಲರು ಪ್ರಕರಣದ ವಿಚಾರಣೆಯನ್ನು ಮುಂದೂಡಬೇಕೆಂದು ಕೋರಿ ಪತ್ರ ಬರೆದಿದ್ದಾರೆ. ಈ ಬಗ್ಗೆ ಸೂಕ್ತ ಪೀಠವು ಮೂರು ವಾರಗಳ ಬಳಿಕ ವಿಚಾರಣೆ ನಡೆಸಲಿದೆ ಎಂದು ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ದಿನೇಶ್ ಮಹೇಶ್ವರಿ ಅವರ ರಜಾ ಪೀಠ ಆದೇಶದಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.