ADVERTISEMENT

ನ್ಯಾಯಾಂಗದ ವಿರುದ್ಧ ಹೇಳಿಕೆ ಪ್ರಕರಣ; ಧನಕರ್‌,ರಿಜಿಜು ವಿರುದ್ಧದ ಅರ್ಜಿ ನಾಳೆ ವಿಚಾರಣೆ

ಪಿಟಿಐ
Published 14 ಮೇ 2023, 14:43 IST
Last Updated 14 ಮೇ 2023, 14:43 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌    

ನವದೆಹಲಿ : ನ್ಯಾಯಾಂಗದ ವಿರುದ್ಧ ಹೇಳಿಕೆ ನೀಡಿರುವ ಹಾಗೂ ಕೊಲಿಜಿಯಂ ವ್ಯವಸ್ಥೆಯನ್ನು ಟೀಕಿಸಿರುವ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಹಾಗೂ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಬಾಂಬೆ ವಕೀಲರ ಸಂಘವು (ಬಿಎಲ್‌ಎ) ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಿಚಾರಣೆ ನಡೆಸಲಿದೆ. 

‘ಬಿಎಲ್‌ಎ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿಗಳಾದ ಸಂಜಯ್‌ ಕಿಶನ್‌ ಕೌಲ್‌ ಹಾಗೂ ಅಹ್ಸಾನುದ್ದೀನ್‌ ಅಮಾನುಲ್ಲಾ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠದ ಎದುರು ವಿಚಾರಣೆಗೆ ನಿಗದಿಯಾಗಿದೆ’ ಎಂದು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ಬಿಎಲ್‌ಎ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ಈ ವರ್ಷದ ಫೆಬ್ರುವರಿ 9ರಂದು ವಜಾಗೊಳಿಸಿತ್ತು. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.