ADVERTISEMENT

ಅಂತರಧರ್ಮೀಯ ವಿವಾಹಕ್ಕಾಗಿ ಮತಾಂತರ: ಫೆ. 3ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಪಿಟಿಐ
Published 30 ಜನವರಿ 2023, 15:33 IST
Last Updated 30 ಜನವರಿ 2023, 15:33 IST
.
.   

ನವದೆಹಲಿ: ಅಂತರಧರ್ಮೀಯ ವಿವಾಹಕ್ಕಾಗಿ ಮತಾಂತರಗೊಳ್ಳುವುದನ್ನು ನಿಯಂತ್ರಿಸುವ ಉದ್ದೇಶದಿಂದ ಕೆಲ ರಾಜ್ಯಗಳು ಜಾರಿಗೊಳಿಸಿರುವ ಕಾನೂನಿನ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಫೆಬ್ರುವರಿ 3ರಂದು ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ.

ಈ ಕುರಿತ ಅರ್ಜಿಯೊಂದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಪಿ.ಎಸ್‌. ನರಸಿಂಹ ಮತ್ತು ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠವು, ಅರ್ಜಿಗಳ ವಿಚಾರಣೆಗಾಗಿ ಈ ದಿನಾಂಕವನ್ನು ನಿಗದಿಪಡಿಸಿದೆ.

ರಾಜ್ಯಗಳ ಈ ಕಾನೂನಿನಿಂದಾಗಿ ಜನರು ಮದುವೆಯಾಗಲು ಸಾಧ್ಯವಾಗುತ್ತಿಲ್ಲ. ಪರಿಸ್ಥಿತಿಯು ಗಂಭೀರವಾಗಿದೆ ಎಂದು ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೀತಲ್‌ವಾಡ್ ಅವರ ಸ್ವಯಂ ಸೇವಾ ಸಂಸ್ಥೆಯ (ಎನ್‌ಜಿಒ) ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಸಿ.ಯು. ಸಿಂಗ್‌ ನ್ಯಾಯಪೀಠಕ್ಕೆ ತಿಳಿಸಿದರು.

ADVERTISEMENT

ಇದು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಕಾನೂನಾಗಿರುವುದರಿಂದ ಇದಕ್ಕೆ ಸಂಬಂಧಿಸಿರುವ ಪ್ರಕರಣಗಳನ್ನು ಹೈಕೋರ್ಟ್‌ಗಳು ಆಲಿಸಬೇಕು ಎಂದು ಅಟಾರ್ನಿ ಜನರಲ್‌ ಆರ್‌. ವೆಂಕಟರಮಣಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.