ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ–2025ರ ಸಿಂಧುತ್ವ ಪ್ರಶ್ನಿಸಿ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸೇರಿದಂತೆ 10 ಮಂದಿ ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ನ್ಯಾಯಪೀಠ ಏ.16ರಂದು ವಿಚಾರಣೆ ನಡೆಸಲಿದೆ.
ನ್ಯಾಯಮೂರ್ತಿ ಸಂಜಯ್ ಕುಮಾರ್, ನ್ಯಾಯಮೂರ್ತಿ ಕೆ.ವಿ.ವಿಶ್ವನಾಥ ಅವರನ್ನೂ ಸಿಜೆಐ ನೇತೃತ್ವದ ಪೀಠ ಒಳಗೊಂಡಿರಲಿದೆ. ಓವೈಸಿ ಅವರ ಅರ್ಜಿಯ ಹೊರತಾಗಿ ಆಪ್ ನಾಯಕ ಅಮಾನತ್ ಉಲ್ಲಾ ಖಾನ್, ಆರ್‌ಜೆಡಿ ನಾಯಕ ಮನೋಜ್ ಕುಮಾರ್ ಜ್ಹಾ, ಕಾಂಗ್ರೆಸ್ ನಾಯಕ ಇಮ್ರಾನ್ ಪ್ರತಾಪ್‌ಗಢಿ ಅವರ ಅರ್ಜಿಗಳೂ ಈ 10ರಲ್ಲಿ ಸೇರಿವೆ.
ಇತ್ತ ಕೇಂದ್ರ ಸರ್ಕಾರವೂ ಏ.8ರಂದು ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿದ್ದು, ವಕ್ಫ್ ಕಾಯ್ದೆ ವಿಚಾರವಾಗಿ ಯಾವುದೇ ಆದೇಶ ಹೊರಡಿಸುವುದಕ್ಕೆ ಮುನ್ನ ತನ್ನ ವಾದ ಆಲಿಸುವಂತೆ ಕೋರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.