ADVERTISEMENT

ಪಿಜಿ ಸೀಟುಗಳಲ್ಲಿ ಸೇವಾ ನಿರತ ವೈದ್ಯರಿಗೆ ಮೀಸಲಾತಿ

ಸುಪ್ರೀಂಕೋರ್ಟ್‌ನಿಂದ ಇಂದು ತೀರ್ಪು

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2020, 14:45 IST
Last Updated 30 ಆಗಸ್ಟ್ 2020, 14:45 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ:ಸರ್ಕಾರಿ ಸೇವೆಯಲ್ಲಿರುವ ವೈದ್ಯರಿಗೆ ಸ್ನಾತಕೋತ್ತರ ಕೋರ್ಸ್‌ಗಳ ಸೀಟುಗಳಲ್ಲಿ ಮೀಸಲಾತಿ ನೀಡಲು ರಾಜ್ಯಗಳಿಗೆ ಅನುಮತಿ ನೀಡಬೇಕು ಎಂಬ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಸೋಮವಾರ ತೀರ್ಪು ನೀಡಲಿದೆ.

ನ್ಯಾಯಮೂರ್ತಿಗಳಾದ ಅರುಣ್‌ ಮಿಶ್ರಾ, ವಿನೀತ್‌ ಸರನ್‌, ಇಂದಿರಾ ಬ್ಯಾನರ್ಜಿ, ಎಂ.ಆರ್‌.ಶಾ ಹಾಗೂ ಅನಿರುದ್ಧ ಬೋಸ್‌ ಅವರನ್ನು ಒಳಗೊಂಡ ಸಾಂವಿಧಾನಿಕ ಪೀಠ ಅರ್ಜಿಯ ವಿಚಾರಣೆ ನಡೆಸಿ, ಜುಲೈ 14ರಂದು ತೀರ್ಪು ಕಾಯ್ದಿರಿಸಿತ್ತು.

ತಮಿಳುನಾಡು ಮೆಡಿಕಲ್‌ ಆಫೀಸರ್ಸ್‌ ಅಸೋಸಿಯೇಷನ್ ಪದಾಧಿಕಾರಿಗಳಲ್ಲದೇ, ಕೇರಳ, ಮಹಾರಾಷ್ಟ್ರ ಹಾಗೂ ಹರಿಯಾಣ ರಾಜ್ಯಗಳ ವೈದ್ಯರು‌ ಅರ್ಜಿ ಸಲ್ಲಿಸಿದ್ದಾರೆ.

ADVERTISEMENT

ಭಾರತೀಯ ವೈದ್ಯಕೀಯ ಮಂಡಳಿಯ (ಎಂಸಿಐ) ನಿಯಮಗಳ ಪ್ರಕಾರ,ಸ್ನಾತಕೋತ್ತರ ವೈದ್ಯಕೀಯ ಡಿಪ್ಲೊಮಾ ಕೋರ್ಸ್‌ಗಳಲ್ಲಿ ಶೇ 50ರಷ್ಟು ಸೀಟುಗಳನ್ನು ಸರ್ಕಾರಿ ಸೇವೆಯಲ್ಲಿರುವ ವೈದ್ಯರಿಗೆ ಮೀಸಲಿರಿಸಲಾಗಿದೆ. ಆದರೆ, ಸ್ನಾತಕೋತ್ತರ ಕೋರ್ಸ್‌ಗಳಿಗೆ ಈ ಮೀಸಲಾತಿ ಸೌಲಭ್ಯ ನೀಡಲಾಗಿಲ್ಲ. ಈ ನಿಯಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.