ADVERTISEMENT

ಮರಾಠರಿಗೆ ಮೀಸಲಾತಿ: ‘ಸುಪ್ರೀಂ’ನಿಂದ ಇಂದು ತೀರ್ಪು

ಪಿಟಿಐ
Published 4 ಮೇ 2021, 16:44 IST
Last Updated 4 ಮೇ 2021, 16:44 IST
ಸುಪ್ರೀಂ ಕೋರ್ಟ್‌ (ಪಿಟಿಐ ಚಿತ್ರ) 
ಸುಪ್ರೀಂ ಕೋರ್ಟ್‌ (ಪಿಟಿಐ ಚಿತ್ರ)    

ನವದೆಹಲಿ: ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗದಲ್ಲಿ ಮರಾಠರಿಗೆ ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದ್ದ ಬಾಂಬೆ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂಕೋರ್ಟ್‌ ಬುಧವಾರ ಪ್ರಕಟಿಸಲಿದೆ.

ನ್ಯಾಯಮೂರ್ತಿ ಅಶೋಕಭೂಷಣ್‌ ನೇತೃತ್ವದ ಐವರು ನ್ಯಾಯಮೂರ್ತಿಗಳಿರುವ ಸಾಂವಿಧಾನಿಕ ಪೀಠ ತೀರ್ಪು ಪ್ರಕಟಿಸಲಿದೆ.

‘ಮರಾಠರಿಗೆ ಮೀಸಲಾತಿ ನೀಡುವ ಸಂಬಂಧ ಮಹಾರಾಷ್ಟ್ರ ಸರ್ಕಾರ ರೂಪಿಸಿದ್ದ ನಿಯಮವನ್ನು ಬಾಂಬೆ ಹೈಕೋರ್ಟ್‌ 2019ರ ಜೂನ್‌ನಲ್ಲಿ ಎತ್ತಿ ಹಿಡಿದಿತ್ತು. ಆದರೆ, ಮೀಸಲಾತಿ ಪ್ರಮಾಣ ಶೇ 16ರಷ್ಟು ನಿಗದಿ ಮಾಡಿರುವುದು ಸಮರ್ಥನೀಯವಲ್ಲ ಎಂದು ಹೇಳಿದ್ದ ಹೈಕೋರ್ಟ್‌, ಮೀಸಲಾತಿ ಪ್ರಮಾಣ ಉದ್ಯೋಗ ಕ್ಷೇತ್ರದಲ್ಲಿ ಶೇ 12 ಹಾಗೂ ಶಿಕ್ಷಣದಲ್ಲಿ ಶೇ 13ರಷ್ಟು ಮೀರಬಾರದು’ ಎಂದು ಹೇಳಿತ್ತು.

ADVERTISEMENT

ಈ ಆದೇಶವನ್ನು ಪ್ರಶ್ನಿಸಿದ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಕಳೆದ ಮಾರ್ಚ್‌ನಲ್ಲಿ ಸುಪ್ರೀಂಕೋರ್ಟ್‌ ಆರಂಭಿಸಿತ್ತು. ಮಾರ್ಚ್‌ 26ರಂದು ತೀರ್ಪನ್ನು ಕಾಯ್ದಿರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.