ADVERTISEMENT

ಸಂಸ್ಕೃತವನ್ನು ರಾಷ್ಟ್ರ ಭಾಷೆಯಾಗಿ ಘೋಷಿಸಲು ಕೋರಿದ್ದ ಪಿಐಎಲ್‌ ಸುಪ್ರೀಂನಲ್ಲಿ ವಜಾ

ಪಿಟಿಐ
Published 2 ಸೆಪ್ಟೆಂಬರ್ 2022, 16:53 IST
Last Updated 2 ಸೆಪ್ಟೆಂಬರ್ 2022, 16:53 IST
   

ನವದೆಹಲಿ: ಸಂಸ್ಕೃತ ಭಾಷೆಯನ್ನು ರಾಷ್ಟ್ರ ಭಾಷೆಯಾಗಿ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಸುಪ್ರೀಂ ಕೋರ್ಟ್ ವಜಾ ಮಾಡಿದೆ.

ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ವಿಭಾಗೀಯ ಪೀಠ, ಈ ವಿಷಯವನ್ನು ಪ್ರಸ್ತಾಪಿಸಲು ಸಂಸತ್ತು ಸೂಕ್ತ ಸ್ಥಳವಾಗಿದೆ, ನ್ಯಾಯಾಲಯವಲ್ಲ ಎಂದು ಹೇಳಿದೆ.

‘ನಾವೇಕೆ ಸರ್ಕಾರಕ್ಕೆ ನೋಟಿಸ್ ನೀಡಬೇಕು? ನಿಮ್ಮ ಕೆಲವು ವಿಚಾರಗಳನ್ನು ನಾವಿಲ್ಲಿ ಹಂಚಿಕೊಳ್ಳಬಹುದೇ ಹೊರತು, ಈ ಕುರಿತ ಚರ್ಚೆಗೆ ಸಂಸತ್ತು ಸೂಕ್ತ ಸ್ಥಳವಾಗಿದೆ. ಸಂಸ್ಕೃತವನ್ನು ರಾಷ್ಟ್ರ ಭಾಷೆಯಾಗಿ ಘೋಷಿಸುವಂತೆ ಸರ್ಕಾರಕ್ಕೆ ಯಾವುದೇ ನೋಟಿಸ್ ನೀಡಲು ಬರುವುದಿಲ್ಲ’ ಎಂದು ಹೇಳಿದ ನ್ಯಾಯಪೀಠ, ಪಿಐಎಲ್‌ ಅನ್ನು ವಜಾ ಮಾಡಿದೆ.

ADVERTISEMENT

ಸಂಬಂಧಪಟ್ಟ ಇಲಾಖೆ ಬಳಿ ತಮ್ಮ ವಾದ ಮಂಡಿಸುವಂತೆ ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ಸೂಚಿಸಿದೆ.

ಮಾಜಿ ಐಎಎಸ್ ಅಧಿಕಾರಿ ಮತ್ತು ವಕೀಲ ಕೆ.ಜಿ. ವಂಜಾರ ಈ ಪಿಐಎಲ್ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.