ADVERTISEMENT

ಖಾತರಿ ನೀಡಿದವರಿಂದ ಸಾಲ ವಸೂಲಿ: ಕೇಂದ್ರದ ಅಧಿಸೂಚನೆ ಎತ್ತಿ ಹಿಡಿದ ‘ಸುಪ್ರೀಂ’

ಪಿಟಿಐ
Published 21 ಮೇ 2021, 10:34 IST
Last Updated 21 ಮೇ 2021, 10:34 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಕಂಪನಿಯೊಂದಕ್ಕೆ ನೀಡಿದ್ದ ಸಾಲವನ್ನು, ಖಾತರಿ ನೀಡಿದವರಿಂದ ವಸೂಲಿ ಮಾಡಲು ಬ್ಯಾಂಕುಗಳಿಗೆ ಅನುಮತಿ ನೀಡಿ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಸುಪ್ರೀಂಕೋರ್ಟ್‌ ಶುಕ್ರವಾರ ಎತ್ತಿ ಹಿಡಿದಿದೆ.

‘ಹಣಕಾಸು ನಷ್ಟ ಮತ್ತು ದಿವಾಳಿ ಸಂಹಿತೆ’ (ಐಬಿಸಿ)ಯಡಿ ಸಾಲ ವಸೂಲು ಮಾಡಲು ಬ್ಯಾಂಕುಗಳಿಗೆ ಅನುಮತಿ ನೀಡಿ ಕೇಂದ್ರ ಸರ್ಕಾರ 2019ರ ನವೆಂಬರ್‌ 15ರಂದು ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆಯ ಸಿಂಧುತ್ವವನ್ನು ಪ್ರಶ್ನಿಸಿ 75ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ.

ನ್ಯಾಯಮೂರ್ತಿಗಳಾದ ಎಲ್‌.ನಾಗೇಶ್ವರರಾವ್‌ ಹಾಗೂ ಎಸ್‌.ರವೀಂದ್ರ ಭಟ್‌ ಅವರಿರುವ ನ್ಯಾಯಪೀಠ ಈ ಅರ್ಜಿಗಳ ವಿಚಾರಣೆ ನಡೆಸಿತು.

ADVERTISEMENT

‘ಖಾತರಿ ನೀಡಿದ ವ್ಯಕ್ತಿಗಳು ಬ್ಯಾಂಕುಗಳಿಗೆ ಸಾಲದ ಮೊತ್ತವನ್ನು ಮರುಪಾವತಿಸುವ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗದು’ ಎಂದು ನ್ಯಾಯಪೀಠ ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.