ADVERTISEMENT

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ತಿದ್ದುಪಡಿ ಎತ್ತಿಹಿಡಿದ ಸುಪ್ರೀಂ

ಪಿಟಿಐ
Published 8 ಏಪ್ರಿಲ್ 2022, 15:37 IST
Last Updated 8 ಏಪ್ರಿಲ್ 2022, 15:37 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ(ಪಿಟಿಐ): 2010ರ ವಿದೇಶಿ ದೇಣಿಗೆ(ನಿಯಂತ್ರಣ) ಕಾಯ್ದೆಗೆ ಮಾಡಲಾದ ತಿದ್ದುಪಡಿಗಳ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಹಿಂದೆ ವಿದೇಶಿ ದೇಣಿಗೆಯ ದುರುಪಯೋಗ ಮತ್ತು ದುರ್ಬಳಕೆ ಆಗಿರುವುದನ್ನು ಗಮನಿಸಿ, ಕಠಿಣಕ್ರಮಕೈಗೊಳ್ಳಲು ಮುಂದಾಗಿರುವುದು ಸರಿಯಾಗಿದೆ ಎಂದು ತಿಳಿಸಿದೆ.

ಎನ್‌ಜಿಒಗಳು ವಿದೇಶಗಳಿಂದ ಪಡೆದಿರುವ ದೇಣಿಗೆ ನಿರ್ದಿಷ್ಟ ಉದ್ದೇಶಕ್ಕೆ ಬಳಸಿಕೊಂಡಿಲ್ಲ. ಹೀಗಾಗಿಕಠಿಣ ಕ್ರಮಕೈಗೊಳ್ಳುವುದು ಅಗತ್ಯವಾಗಿದೆ. ಈ ಕಾಯ್ದೆ ಜಾರಿಯಾದ ನಂತರ 19,000ಕ್ಕೂ ಹೆಚ್ಚು ಸಂಸ್ಥೆಗಳ ಪ್ರಮಾಣ ಪತ್ರಗಳನ್ನು ರದ್ದುಪಡಿಸಲಾಗಿತ್ತು ಎಂದು ನ್ಯಾಯಾಲಯ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT