ADVERTISEMENT

ಸೆ. 30ರೊಳಗೆ ಅಂತಿಮ ವರ್ಷದ ಪದವಿ ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್‌ ಸೂಚನೆ

ಯುಜಿಸಿ ಅಧಿಸೂಚನೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2020, 6:45 IST
Last Updated 28 ಆಗಸ್ಟ್ 2020, 6:45 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ವಿಶ್ವವಿದ್ಯಾಲಯದ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಬೇಕೆಂಬ ವಿಶ್ವವಿದ್ಯಾಲಯ ಅನುದಾನ ಆಯೋಗದ(ಯುಜಿಸಿ) ಅಧಿಸೂಚನೆಯನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್‌, ಸೆಪ್ಟೆಂಬರ್ 30ರೊಳಗೆ ಅಂತಿಮ ಪರೀಕ್ಷೆಗಳನ್ನು ನಡೆಸದೇ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ.ಜುಲೈ 6ರಂದು ಯುಜಿಸಿ ಅಧಿಸೂಚನೆ ನೀಡಿತ್ತು.

ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ರಾಜ್ಯ ಸರ್ಕಾರಗಳು ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಲೇಬೇಕು. ಆದರೆ, ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣೆ ಕಾಯ್ದೆಯಡಿಯಲ್ಲಿ ಪರೀಕ್ಷೆಗಳನ್ನು ಮುಂದೂಡುವ ಅಥವಾ ಪರೀಕ್ಷೆ ನಡೆಸುವುದಕ್ಕಾಗಿ ದಿನಾಂಕ ನಿಗದಿಪಡಿಸಲು ರಾಜ್ಯ ಸರ್ಕಾರಗಳು ಯುಜಿಸಿಯನ್ನು ಸಂಪರ್ಕಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT