(ಪಿಟಿಐ ಚಿತ್ರ)
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಎಎಪಿ ನಾಯಕಿ ಆತಿಶಿ, ಇದು 'ಸತ್ಯಕ್ಕೆ ಸಿಕ್ಕ ಜಯ' ಎಂದು ಹೇಳಿದ್ದಾರೆ.
ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿರುವ ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸಿರುವ ಆತಿಶಿ, 'ಇದರ ಹಿಂದೆ ಬಿಜೆಪಿ ಸಂಚು ಅಡಗಿರುವುದು ಸಾಬೀತುಗೊಂಡಿದೆ' ಎಂದು ಹೇಳಿದ್ದಾರೆ.
'ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಸಿಗಲಿದೆ ಎಂದು ಬಿಜೆಪಿಗೆ ತಿಳಿದಿತ್ತು. ಅದಕ್ಕಾಗಿ ಅವರನ್ನು ಸಿಬಿಐ ಬಂಧಿಸಿತ್ತು' ಎಂದು ಆತಿಶಿ ಆರೋಪಿಸಿದ್ದಾರೆ.
'ಕೇಜ್ರಿವಾಲ್ ಪ್ರಾಮಾಣಿಕ ವ್ಯಕ್ತಿವಾಗಿದ್ದು, ಪ್ರಾಮಾಣಿಕವಾಗಿಯೇ ಇರುತ್ತಾರೆ' ಎಂದು ಅವರು ಉಲ್ಲೇಖಿಸಿದ್ದಾರೆ.
ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿಕೊಂಡ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಜಾಮೀನು ಲಭಿಸಿದರೂ, ಜೈಲಿನಿಂದ ಹೊರಬರುವಂತಿಲ್ಲ. ಇದೇ ಪ್ರಕರಣದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅವರನ್ನು ಸಿಬಿಐ ಬಂಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.