ADVERTISEMENT

ಸುರಕ್ಷತಾ ಕ್ರಮ ಅಳವಡಿಸಿಕೊಳ್ಳದ ಶಾಲಾ ಬಸ್‌ ಮಾಲೀಕರಿಗೆ ದಂಡ

​ಪ್ರಜಾವಾಣಿ ವಾರ್ತೆ
Published 11 ಜುಲೈ 2019, 17:58 IST
Last Updated 11 ಜುಲೈ 2019, 17:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನೊಯ್ಢಾ: ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳದ ಗ್ರೇಟರ್‌ ನೊಯ್ಡಾದ 427 ಶಾಲಾ ಬಸ್‌ಗಳ ಮಾಲೀಕರಿಗೆ ‘ಚಲನ್‌’ಗಳನ್ನು ನೀಡಲಾಗಿದ್ದು, ಈ ಮೂಲಕ₹ 26,700 ದಂಡ ವಸೂಲು ಮಾಡಲಾಗಿದೆ.

‘ಆಪ‍ರೇಷನ್‌ ಕ್ಲೀನ್‌’ ಎಂಬ ವಿಶೇಷ ಕಾರ್ಯಕ್ರಮದಡಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನಗರದ ವ್ಯಾಪ್ತಿಯಲ್ಲಿ ಬರುವ 129 ಶಾಲೆಗಳಲ್ಲಿ ಇದನ್ನು ಜಾರಿಗೊಳಿಸಲಾಗಿದೆ. ನಿತ್ಯ ಬೆಳಗ್ಗೆ 6.30ಕ್ಕೆ ಬಸ್‌ಗಳನ್ನು ಪರಿಶೀಲಿಸಲಾಗುತ್ತಿದೆ. ಅಭಿಯಾನ ಮಾದರಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆಎಂದುಗೌತಮ ಬುದ್ಧ ನಗರದ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ ವೈಭವ್‌ ಕೃಷ್ಣ ಹೇಳಿದ್ದಾರೆ.

ವಾಹನದ ಸಾಮರ್ಥ್ಯಕ್ಕಿಂತ ಹೆಚ್ಚು ಮಕ್ಕಳನ್ನು ತುಂಬುವುದು, ಸಂಚಾರ ನಿಯಮ ಉಲ್ಲಂಘನೆ ಮತ್ತುಮಕ್ಕಳ ರಕ್ಷಣಾ ನಿರ್ಲಕ್ಷ್ಯದ ಕುರಿತು ಸಾರ್ವಜನಿಕರು ದೂರು ನೀಡಿದ್ದರು. ಈ ಆಧಾರದ ಮೇಲೆ ಕಾರ್ಯಾಚರಣೆ ಆರಂಭಿಸಲಾಗಿದೆ.702 ಬಸ್‌ ಮತ್ತು ವ್ಯಾನ್‌ಗಳಿಗೆ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.