ಕೆಲಸ ಕಳೆದುಕೊಂಡ ಶಿಕ್ಷಕಿಯೊಬ್ಬರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂಭಾಗ ಕಣ್ಣೀರಿಟ್ಟರು
ಪಿಟಿಐ ಚಿತ್ರ
ಕೋಲ್ಕತ್ತ: ಕೆಲಸ ಕಳೆದುಕೊಂಡ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಯ ಸಭೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಇಲ್ಲಿ ನಡೆಸಿದರು.
ನಗರದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಭೆಗೆ ಹೆಚ್ಚಿನ ಜನರು ಜಮಾಯಿಸಿದ್ದರಿಂದ, ಬಹಳಷ್ಟು ಜನರು ಕ್ರೀಡಾಂಗಣದ ಹೊರಭಾಗದಲ್ಲೇ ಮುಖ್ಯಮಂತ್ರಿ ಭೇಟಿಗಾಗಿ ಕಾದು ನಿಂತರು.
ನಿರೀಕ್ಷೆಗೂ ಮೀರಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕ್ರೀಡಾಂಗಣದ ಹೊರಭಾಗದಲ್ಲಿ ನಿಂತಿದ್ದರಿಂದ ಅವ್ಯವಸ್ಥೆ ಉಂಟಾಯಿತು. ಜನದಟ್ಟಣೆ ನಿಯಂತ್ರಿಸಲು ಹಾಗೂ ಪ್ರವೇಶ ಪತ್ರ ಹೊಂದಿದ್ದವರನ್ನು ಸಭೆಗೆ ಕಳುಹಿಸಲು ಪೊಲೀಸರು ಪ್ರಯಾಸಪಟ್ಟರು.
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 25 ಸಾವಿರಕ್ಕೂ ಹೆಚ್ಚು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ನೇಮಕಾತಿಯನ್ನು ರದ್ದುಗೊಳಿಸಿದ ಕಲ್ಕತ್ತ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ಕಳೆದ ವಾರ ಎತ್ತಿ ಹಿಡಿದಿತ್ತು. ಇದರಿಂದಾಗಿ ಅವರೆಲ್ಲ ಕೆಲಸ ಕಳೆದುಕೊಂಡಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೋಲ್ಕತ್ತದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ನಡೆಸಿದ ಸಭೆಯಲ್ಲಿ ಕೆಲಸ ಕಳೆದುಕೊಂಡ ಬೋಧಕರು– ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.