ಮಣಿಪುರ ಹಿಂಸಾಚಾರ
ಪಿಟಿಐ ಚಿತ್ರ
ಇಂಫಾಲ್: ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟ ಪರಿಣಾಮ ಮುಚ್ಚಲ್ಪಟ್ಟಿದ್ದ ಶಾಲಾ ಕಾಲೇಜುಗಳು ಮಂಗಳವಾರ ಮತ್ತೆ ಪುನರಾರಂಭವಾಗಿವೆ ಎಂದು ಸರ್ಕಾರ ಹೇಳಿದೆ.
ಸೆಪ್ಟೆಂಬರ್ 7ರಿಂದ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿತ್ತು.
ಜನಾಂಗೀಯ ಕಲಹದಿಂದಾಗಿ ಕಳದೊಂದು ವಾರದಿಂದ ಮಣಿಪುರದಲ್ಲಿ ಪರಿಸ್ಥಿತಿ ಬಿಗಡಾಯಿಸಿತ್ತು. ಸ್ಥಳೀಯರು ಭದ್ರತಾಪಡೆಗಳೊಂದಿಗೆ ಘರ್ಷಣೆ ನಡೆಸಿದ್ದರು. ರಾಜ್ಯದಲ್ಲಿ ಜನಾಂಗೀಯ ಕಲಹ ಖಂಡಿಸಿ ವಿದ್ಯಾರ್ಥಿಗಳು ಬೀದಿಗಿಳಿದಿದ್ದರು. ಈ ಹಿನ್ನೆಲೆಯಲ್ಲಿ ಹಲವಾರು ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಲಾಗಿತ್ತು.
ಇದೀಗ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದ್ದು ಶಾಲೆಗಳನ್ನು ಆರಂಭಿಸಲಾಗಿದೆ ಎಂದು ಸರ್ಕಾರ ಅಧಿಕಾರಿಗಳು ಹೇಳಿದ್ದಾರೆ.
ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲದಲ್ಲಿ ಜನಾಂಗೀಯ ಕಲಹದಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.