ADVERTISEMENT

ಕಾಶ್ಮೀರದಲ್ಲಿ 2 ವರ್ಷದ ನಂತರ ತೆರೆದ ಶಾಲೆಗಳು: ವಿದ್ಯಾರ್ಥಿಗಳಲ್ಲಿ ಸಂತಸ

ಐಎಎನ್ಎಸ್
Published 2 ಮಾರ್ಚ್ 2022, 9:50 IST
Last Updated 2 ಮಾರ್ಚ್ 2022, 9:50 IST
ವಿದ್ಯಾರ್ಥಿಗಳಿಗೆ ಶಿಕ್ಷಕರು ಗುಲಾಬಿ ಹೂ ನೀಡಿ ಸ್ವಾಗತಿಸಿದರು –ಪಿಟಿಐ ಚಿತ್ರ
ವಿದ್ಯಾರ್ಥಿಗಳಿಗೆ ಶಿಕ್ಷಕರು ಗುಲಾಬಿ ಹೂ ನೀಡಿ ಸ್ವಾಗತಿಸಿದರು –ಪಿಟಿಐ ಚಿತ್ರ   

ಶ್ರೀನಗರ: ಜಮ್ಮು–ಕಾಶ್ಮೀರದಲ್ಲಿ ಸತತ 2 ವರ್ಷಗಳ ಬಳಿಕ ಶಾಲೆಗಳಲ್ಲಿ ಭೌತಿಕ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಸಂತಸ ಮೂಡಿಸಿದೆ.

ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಏಕಕಾಲಕ್ಕೆ ಆರಂಭಿಸಲಾಗಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ದೃಶ್ಯಗಳು ಹಲವೆಡೆ ಕಂಡುಬಂದವು.

‘ಶಾಲೆಗಳಲ್ಲಿ ಶೈಕ್ಷಣಿಕ ಮತ್ತು ಇತರ ಚಟುವಟಿಕೆಗಳನ್ನು ಪ್ರಾರಂಭಿಸಬೇಕೆಂದು ನಾವು ಬಯಸುತ್ತೇವೆ. ಎಲ್ಲಾ ಮಕ್ಕಳಿಗೆ ಆರಂಭದಲ್ಲಿ ಅಚ್ಚುಕಟ್ಟಾದ ಸಮವಸ್ತ್ರ ಲಭ್ಯವಿಲ್ಲದಿರಬಹುದು. ಹಾಗಾಗಿ ಕೆಲವು ವಾರಗಳವರೆಗೆ ಸಮವಸ್ತ್ರ ಕಡ್ಡಾಯವಿರುವುದಿಲ್ಲ’ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

‘ನನ್ನ ಮಗ ಶಾಲೆಗೆ ಯಾವಾಗ ಹೊರಡಬೇಕು ಎಂದು ಮುಂಜಾನೆಯಿಂದ ನನ್ನನ್ನು ಕೇಳುತ್ತಲೇ ಇದ್ದ. ಅವನು ತೆರಳುವುದಕ್ಕೆ ಹೆಚ್ಚು ಉತ್ಸುಕನಾಗಿದ್ದ’ ಎಂದು ಶ್ರೀನಗರ ನಗರದ ಅಪ್‌ಟೌನ್‌ ನಿವಾಸಿ ಸೈಮಾ ಹೇಳಿದ್ದಾರೆ.

ಶಾಲೆಗಳಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.