ADVERTISEMENT

ಭಯೋತ್ಪಾದನೆ ವಿರುದ್ಧ ಹೋರಾಡಲು ಎಲ್ಲ ರಾಷ್ಟ್ರಗಳು ಒಂದಾಗಬೇಕು: ಮೋದಿ

​ಪ್ರಜಾವಾಣಿ ವಾರ್ತೆ
Published 14 ಜೂನ್ 2019, 13:26 IST
Last Updated 14 ಜೂನ್ 2019, 13:26 IST
   

ಬಿಷ್ಕೆಕ್‌: ಭಯೋತ್ಪಾದನೆಯ ಪಿಡುಗಿನ ವಿರುದ್ಧ ಹೋರಾಡುವುದಕ್ಕಾಗಿ ಉಗ್ರ ಕೃತ್ಯಗಳಿಗೆ ಪ್ರಾಯೋಜಕತ್ವ ನೀಡುವ, ಪ್ರೋತ್ಸಾಹಿಸುವ ಮತ್ತು ಧನ ಸಹಾಯ ಮಾಡುವ ರಾಷ್ಟ್ರಗಳನ್ನು ಹೊಣೆಯಾಗಿಸಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಕಿರ್ಗಿಸ್ತಾನ್‌ ರಾಜಧಾನಿ ಬಿಷ್ಕೆಕ್‌ನಲ್ಲಿ ಗುರುವಾರ ಆರಂಭವಾದ ಶಾಂಘೈ ಸಹಕಾರ ಸಂಘದ (ಎಸ್‌ಸಿಒ) ಶೃಂಗಸಭೆಯಲ್ಲಿ ಮಾತನಾಡಿದ ಮೋದಿ, ಭಯೋತ್ಪಾದನೆ ವಿರುದ್ಧ ಹೋರಾಡಲುಎಲ್ಲರ ಸಹಕಾರ ಅಗತ್ಯ. ಭಾರತ ಭಯೋತ್ಪಾದನೆ ಮುಕ್ತ ಸಮಾಜವನ್ನು ಬಯಸುತ್ತದೆ ಎಂದಿದ್ದಾರೆ.

ನಾನು ಕಳೆದ ಭಾನುವಾರ ಶ್ರೀಲಂಕಾಗೆ ಭೇಟಿ ನೀಡಿದಾಗ, ಸೇಂಟ್ ಆ್ಯಂಟನೀಸ್ ಚರ್ಚ್‌ಗೆ ಭೇಟಿ ನೀಡಿದ್ದೆ. ಅಲ್ಲಿ ಮುಗ್ಧ ಜೀವಗಳನ್ನು ಬಲಿತೆಗೆದುಕೊಂಡ ಭಯೋತ್ಪಾದನೆಯ ಕರಾಳ ಮುಖದ ದರ್ಶನವಾಯಿತು.ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಎಲ್ಲ ರಾಷ್ಟ್ರಗಳು ಒಂದಾಗಬೇಕುಎಂದು ಮೋದಿ ಹೇಳಿದ್ದಾರೆ. ಈ ಶೃಂಗಸಭೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕೂಡಾ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.