ADVERTISEMENT

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪಂಚೋಲಿ ನೇಮಕಕ್ಕೆ ಬಿ.ವಿ. ನಾಗರತ್ನ ವಿರೋಧ

ಪಿಟಿಐ
Published 26 ಆಗಸ್ಟ್ 2025, 14:54 IST
Last Updated 26 ಆಗಸ್ಟ್ 2025, 14:54 IST
ನ್ಯಾಯಮೂರ್ತಿ ಬಿ.ವಿ ನಾಗರತ್ನ
ನ್ಯಾಯಮೂರ್ತಿ ಬಿ.ವಿ ನಾಗರತ್ನ    

ನವದೆಹಲಿ: ಪಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಪುಲ್‌ ಮನುಭಾಯ್‌ ಪಂಚೋಲಿ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕ ಮಾಡುವುದಕ್ಕೆ ಶಿಫಾರಸು ಮಾಡಿರುವ ಕೊಲಿಜಿಯಂ ನಿರ್ಧಾರಕ್ಕೆ ನ್ಯಾಯಮೂರ್ತಿ ಬಿ.ವಿ. ನಾಗರತ್ನ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಇವರ ನೇಮಕವು ನ್ಯಾಯಾಂಗಕ್ಕೆ ಮತ್ತು ಕೊಲಿಜಿಯಂನ ವಿಶ್ವಾಸಾರ್ಹತೆಗೆ ಧಕ್ಕೆ ಉಂಟು ಮಾಡುತ್ತದೆ’ ಎಂದು ನ್ಯಾಯಮೂರ್ತಿ ನಾಗರತ್ನ ಅವರು ಅಭಿಪ್ರಾಯಪಟ್ಟಿದ್ದಾರೆ. 2031ರ ವೇಳೆ ನ್ಯಾಯಮೂರ್ತಿ ಪಂಚೋಲಿ ಅವರು ಮುಖ್ಯ ನ್ಯಾಯಮೂರ್ತಿಯಾಗುವ ಸರತಿಯಲ್ಲಿದ್ದಾರೆ.

ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಅರಾಧೆ ಮತ್ತು ನ್ಯಾಯಮೂರ್ತಿ ಪಂಚೋಲಿ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್‌. ಗವಾಯಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌, ವಿಕ್ರಂ ನಾಥ್‌, ಜೆ.ಕೆ. ಮಾಹೇಶ್ವರಿ ಮತ್ತು ನಾಗರತ್ನ ಅವರ ಕೊಲಿಜಿಯಂ ಸೋಮವಾರ ಶಿಫಾರಸು ಮಾಡಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.