ADVERTISEMENT

ಜಮ್ಮು–ಕಾಶ್ಮೀರ: ಉಗ್ರರಿಗಾಗಿ ಮುಂದುವರಿದ ಶೋಧ ಕಾರ್ಯಾಚರಣೆ

ಪಿಟಿಐ
Published 6 ನವೆಂಬರ್ 2021, 7:49 IST
Last Updated 6 ನವೆಂಬರ್ 2021, 7:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಮ್ಮು: ಉಗ್ರರ ಚಲನವಲನಗಳ ಕುರಿತು ಮಾಹಿತಿ ಲಭಿಸುತ್ತಿರುವಂತೆಯೇ ಭದ್ರತಾ ಪಡೆಗಳು ಶೋಧ ಕಾರ್ಯವನ್ನು ಮುಂದುವರಿಸುವೆ. ಖಬ್ಲಾ ಅರಣ್ಯ ಪ್ರದೇಶದಲ್ಲಿ ಉಗ್ರರಿಗಾಗಿ ಶೋಧಕಾರ್ಯವನ್ನು ತೀವ್ರಗೊಳಿಸಿರುವ ಕಾರಣ ರಜೌರಿಯಿಂದ ಥನ್ನಾಮಂಡಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಶನಿವಾರ ಕೆಲಕಾಲ ಸಂಚಾರವನ್ನು ನಿರ್ಬಂಧಿಸಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೂಂಛ್ ಜಿಲ್ಲೆಯ ಸೂರನ್‌ಕೋಟ್ ಮತ್ತು ಮೆಂಧರ್‌ ಅರಣ್ಯ ಪ್ರದೇಶ ಹಾಗೂ ರಜೌರಿ ಜಿಲ್ಲೆಯ ಥನ್ನಾಮಂಡಿಯಲ್ಲಿ ಭದ್ರತಾ ಪಡೆಗಳು ಕೈಗೊಂಡಿರುವ ಉಗ್ರ ನಿಗ್ರಹ ಕಾರ್ಯಾಚರಣೆಯು ಶನಿವಾರ 27ನೇ ದಿನಕ್ಕೆ ಕಾಲಿಟ್ಟಿದೆ.

ಅಕ್ಟೋಬರ್‌ 11 ರಂದು ಸೂರನ್‌ಕೋಟ್ ಅರಣ್ಯ ಮತ್ತು ಅಕ್ಟೋಬರ್‌ 14 ರಂದು ಮೇಂಧರ್‌ ಅರಣ್ಯ ಪ್ರದೇಶದಲ್ಲಿ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಯ ಇಬ್ಬರು ಕಿರಿಯ ಅಧಿಕಾರಿಗಳು ಸೇರಿ ಒಂಬತ್ತು ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.