ಜಮ್ಮು: ಮೂವರು ಅನುಮಾನಾಸ್ಪದ ವ್ಯಕ್ತಿಗಳ ಚಲನವಲನಗಳನ್ನು ಅನುಸರಿಸಿ ಜಮ್ಮು ಮತ್ತು ಕಾಶ್ಮೀರದ ಕಠುವಾ ಜಿಲ್ಲೆಯಲ್ಲಿ ಮಂಗಳವಾರ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಾಜ್‌ಬಾಗ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಮಹಿಳೆಯೊಬ್ಬರು ಕಂಡ ನಂತರ ಶೋಧ ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಭಾರತೀಯ ಸೇನೆ, ಪೊಲೀಸ್ ಮತ್ತು ವಿಶೇಷ ಕಾರ್ಯಾಚರಣಾ ಪಡೆ (ಎಸ್‌ಒಜಿ)ಯ ಜಂಟಿ ತಂಡಗಳು ಶೋಧಕಾರ್ಯದಲ್ಲಿ ನಿರತವಾಗಿದ್ದು, ಪ್ರದೇಶದಲ್ಲಿ ಮತ್ತು ಹೆದ್ದಾರಿಯಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.