ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಮೂವರು ಶಂಕಿತ ಉಗ್ರರ ಚಲನವಲನಗಳು ಕಂಡು ಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದರು.
ಪೊಲೀಸ್ ಹಾಗೂ ಭದ್ರತಾ ಪಡೆಗಳ ಜಂಟಿ ತಂಡವು ನಂಗಲ್, ಚಿಲ್ಲಡಂಗಾ, ಗೋರನ್ ಮತ್ತು ಸಮೀಪದ ಅರಣ್ಯ ಪ್ರದೇಶದ ಸುತ್ತಮುತ್ತ ಶವಿವಾರ ಬೆಳಿಗ್ಗೆಯಿಂದ ಸಂಪೂರ್ಣ ಶೋಧ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಶುಕ್ರವಾರ ಹಾಗೂ ಶನಿವಾರ ಮಧ್ಯರಾತ್ರಿಯ ವೇಳೆ ಮೂವರು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದರು ಎಂಬ ಸ್ಥಳಿಯರ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮಾಡುತ್ತಿವೆ.
ಆದರೆ ಕಾರ್ಯಾಚರಣೆ ವೇಳೆ, ಇದುವರೆಗೂ ಯಾವುದೇ ಭಯೋತ್ಪಾದಕ ಚಟುವಟಿಕೆಗಳು ಕಂಡು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.