ADVERTISEMENT

ಜಮ್ಮು: ಜೆಇಎಂನ ಮೂವರು ಭಯೋತ್ಪಾದಕರ ಪತ್ತೆಗೆ ಮುಂದುವರಿದ ಶೋಧ

ಪಿಟಿಐ
Published 27 ಜೂನ್ 2025, 5:44 IST
Last Updated 27 ಜೂನ್ 2025, 5:44 IST
<div class="paragraphs"><p>ಉಗ್ರರ ಪತ್ತೆಗೆ ಶೋಧ ಕಾರ್ಯದಲ್ಲಿ ನಿರತರಾಗಿದ್ದ ಭದ್ರತಾ ಸಿಬ್ಬಂದಿ </p></div>

ಉಗ್ರರ ಪತ್ತೆಗೆ ಶೋಧ ಕಾರ್ಯದಲ್ಲಿ ನಿರತರಾಗಿದ್ದ ಭದ್ರತಾ ಸಿಬ್ಬಂದಿ

   

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪಾಕಿಸ್ತಾನ ಮೂಲದ ಮೂವರು ಜೈಶ್-ಎ-ಮೊಹಮ್ಮದ್ ( ಜೆಇಎಂ) ಸಂಘಟನೆಯ ಭಯೋತ್ಪಾದಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳ ಜಂಟಿ ತಂಡ ಶುಕ್ರವಾರವೂ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನ ಮೂಲದ ಜೆಇಎಂ ಸಂಘಟನೆಯ ಭಯೋತ್ಪಾದಕನೊಬ್ಬ ಹತನಾಗಿದ್ದಾನೆ. ಆತನ ಮೂವರು ಸಹಚರರು ಬಸಂತ್‌ಗಢ ಪಟ್ಟಿಯ ಅರಣ್ಯ ಪ್ರದೇಶದಲ್ಲಿ ಅಡಗಿದ್ದಾರೆ. ಡ್ರೋನ್‌ಗಳು ಮತ್ತು ಶ್ವಾನದಳದ ಸಹಾಯದೊಂದಿಗೆ ಇಂದು ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಆರಂಭವಾಗಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಕಳೆದೊಂದು ವರ್ಷದಿಂದ ನಾಲ್ವರು ಒಳಗೊಂಡ ಭಯೋತ್ಪಾದಕರ ಪತ್ತೆಗಾಗಿ ಜಾಡು ಹಿಡಿಯಲಾಗಿತ್ತು. ಗುರುವಾರ ಬೆಳಿಗ್ಗೆ ಬಸಂತ್‌ಗಢದ ಬಳಿ ಸೇನೆ ಮತ್ತು ಪೊಲೀಸರ ಜಂಟಿ ಶೋಧ ತಂಡ ಅವರನ್ನು ಎದುರಿಸಿತು.

ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕ ಹತನಾಗಿದ್ದಾನೆ. ಆತನನ್ನು ಹೈದರ್ ಎಂದು ಗುರುತಿಸಲಾಗಿದೆ. ಉಳಿದ ಮೂವರಿಗಾಗಿ ಶೋಧ ಮುಂದುವರಿದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.