ಜಮ್ಮು : ಜಮ್ಮು ಮತ್ತು ಕಾಶ್ಮೀರದ ಕಿಶ್ತವಾಡ ಜಿಲ್ಲೆಯಲ್ಲಿ ಶಂಕಿತ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆದಿದ್ದು, ಬಳಿಕ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಶಿಂಗ್ಪೊರಾ ಹಾಗೂ ಛತ್ರು ಪ್ರದೇಶಗಳಲ್ಲಿ ಉಗ್ರರ ಇರುವ ಖಚಿತ ಮಾಹಿತಿ ಮೇಲೆ ಕಾರ್ಯಾಚರಣೆ ನಡೆಸಿದ್ದು ಈ ವೇಳೆ ಗುಂಡಿನ ಚಕಮಕಿ ನಡೆದಿದೆ.
‘ಛತ್ರುನಲ್ಲಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಗುರುವಾರ ಬೆಳಿಗ್ಗೆ ಉಗ್ರರು ಇರುವ ಬಗ್ಗೆ ಮಾಹಿತಿ ದೊರೆತಿದೆ. ಸ್ಥಳದಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ’ ಎಂದು ವೈಟ್ ನೈಟ್ ಕಾರ್ಪ್ ‘ಎಕ್ಸ್’ನಲ್ಲಿ ಗುರುವಾರ ಪೋಸ್ಟ್ ಮಾಡಿದೆ.
ಈ ಪ್ರದೇಶದಲ್ಲಿ ಇಬ್ಬರು ಅಥವಾ ಮೂವರು ಉಗ್ರರು ಇದ್ದಾರೆ ಎಂದು ವರದಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.