ADVERTISEMENT

Poonch Terrorist Attack: ಉಗ್ರರ ಪತ್ತೆಗಾಗಿ ಮುಂದುವರಿದ ಕಾರ್ಯಾಚರಣೆ

ಪಿಟಿಐ
Published 22 ಡಿಸೆಂಬರ್ 2023, 5:27 IST
Last Updated 22 ಡಿಸೆಂಬರ್ 2023, 5:27 IST
<div class="paragraphs"><p>ಪೂಂಚ್ ಜಿಲ್ಲೆಯಲ್ಲಿ ಉಗ್ರರ ದಾಳಿ</p></div>

ಪೂಂಚ್ ಜಿಲ್ಲೆಯಲ್ಲಿ ಉಗ್ರರ ದಾಳಿ

   

(ಪಿಟಿಐ ಚಿತ್ರ)

ಪೂಂಛ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಉಗ್ರರ ದಾಳಿ ನಡೆದ ಪ್ರದೇಶದಲ್ಲಿ ಭಯೋತ್ಪಾದಕರನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.

ADVERTISEMENT

ಗುರುವಾರದಂದು ಎರಡು ಸೇನಾ ವಾಹನಗಳ ಮೇಲೆ ಉಗ್ರರು ನಡೆಸಿದ್ದ ಹಠಾತ್ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು. ಇಬ್ಬರು ಯೋಧರು ಗಾಯಗೊಂಡಿದ್ದರು.

ಸುರಾನ್‌ಕೋಟ್ ಪೊಲೀಸ್ ಠಾಣಾ ವ್ಯಾಪ್ತಿಯ ಡೇರಾ ಕಿ ಗಲಿ ಮತ್ತು ಬುಫ್ಲಿಯಾಜ್‌ ನಡುವೆ ಧಾತ್ಯರ್ ಮೋರ್‌ನಲ್ಲಿ ದಾಳಿ ನಡೆದಿತ್ತು.

ಉಗ್ರರ ಪತ್ತೆಗಾಗಿ ವೈಮಾನಿಕ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ವಿಶೇಷ ತರಬೇತಿ ಪಡೆದ ಸ್ನಿಫರ್ ಶ್ವಾನ ಬಳಕೆ ಮಾಡಲಾಗಿದೆ. ಈ ಪ್ರದೇಶದಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಕಾರ್ಯಾಚರಣೆ ಮುಂದುವರಿದಿದ್ದು, ಇಡೀ ಪ್ರದೇಶವನ್ನು ಸೇನೆ ಸುತ್ತುವರಿದಿದೆ. ಹೆಚ್ಚುವರಿ ಸೇನಾಪಡೆಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೂಂಛ್ ಜಿಲ್ಲೆಯಲ್ಲಿ ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದ 'ಎಎನ್‌ಐ' ವಿಡಿಯೊ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.