ADVERTISEMENT

ಅಸ್ಸಾಂ, ಪಶ್ಚಿಮ ಬಂಗಾಳ ಚುನಾವಣೆ: ದಾಖಲೆ ಸಂಖ್ಯೆಯ ಮತದಾನಕ್ಕೆ ಮೋದಿ, ಶಾ ಕರೆ

ಏಜೆನ್ಸೀಸ್
Published 1 ಏಪ್ರಿಲ್ 2021, 3:48 IST
Last Updated 1 ಏಪ್ರಿಲ್ 2021, 3:48 IST
 ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್‌ ಶಾ
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್‌ ಶಾ   

ನವದೆಹಲಿ: ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಗಳಿಗೆ ಎರಡನೇ ಹಂತದ ಮತದಾನ ಪ್ರಕ್ರಿಯೆ ಇಂದು ನಡೆಯುತ್ತಿದ್ದು, ಈ ವೇಳೆ ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಜನರಿಗೆ ಕರೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಮೋದಿ, ʼಅಸ್ಸಾಂನಲ್ಲಿ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನುಬಲಪಡಿಸುವಂತೆ ಎಲ್ಲ ಅರ್ಹ ಮತದಾರರಲ್ಲಿ ಮನವಿ ಮಾಡಿಕೊಳ್ಳುತ್ತೇನೆʼ ಎಂದು ತಿಳಿಸಿದ್ದಾರೆ.‌

ಮತ್ತೊಂದು ಟ್ವೀಟ್‌ನಲ್ಲಿ, ʼಇಂದು ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿನ ಜನರು ದಾಖಲೆಯ ಸಂಖ್ಯೆಯಲ್ಲಿ ಮತ ಚಲಾವಣೆ ಮಾಡುವಂತೆ ಒತ್ತಾಯಿಸುತ್ತೇನೆʼ ಎಂದು ಹೇಳಿದ್ದಾರೆ.

ADVERTISEMENT

ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು, ʼಅಸ್ಸಾಂನಲ್ಲಿ ಎರಡನೇ ಹಂತದ ಮತನಾದ ನಡೆಯುತ್ತಿದೆ. ತಪ್ಪದೇ ಮತ ಚಲಾಯಿಸುವಂತೆ ಪ್ರತಿಯೊಬ್ಬರಲ್ಲೂ ಮನವಿ ಮಾಡಿಕೊಳ್ಳುತ್ತೇನೆ. ಯುವ ಮತದಾರರು ಶಾಂತಿ ಮತ್ತು ಸ್ವಾವಲಂಬಿ ಅಸ್ಸಾಂಗಾಗಿ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದುವಿಶೇಷವಾಗಿ ಮನವಿ ಮಾಡುತ್ತೇನೆʼ ಎಂದು ಟ್ವೀಟ್‌ ಮಾಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸಂಬಂಧಇನ್ನೊಂದು ಟ್ವೀಟ್‌ ಮಾಡಿರುವ ಅವರು, ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ. ನಿಮ್ಮ ಒಂದು ಮತವು ನಿರ್ಣಾಯಕ ಬದಲಾವಣೆಯನ್ನು ತರಬಹುದು. ಹಾಗಾಗಿ ಸುರಕ್ಷಿತ ಮತ್ತು ಸಮೃದ್ಧ ಬಂಗಾಳಕ್ಕಾಗಿಹೊರಬಂದು ಮತ ಚಲಾಯಿಸಿʼ ಎಂದು ಕೋರಿದ್ದಾರೆ.

ಅಸ್ಸಾಂನ 39 ಮತ್ತುಬಂಗಾಳದ 30 ವಿಧಾನಸಭೆ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಎರಡೂ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯೇ ಚುನಾವಣೆಯ ಪ್ರಮುಖ ವಿಚಾರವಾಗಿತ್ತು. ಅಧಿಕಾರಕ್ಕೆ ಬಂದರೆ ಕಾಯ್ದೆ ಅಂಗೀಕರಿಸುವುದಾಗಿ ಬಿಜೆಪಿ ಮತ್ತು ಕಾಯ್ದೆಯನ್ನು ರದ್ದುಪಡಿಸುವುದಾಗಿ ಕಾಂಗ್ರೆಸ್‌ ಪ್ರಚಾರ ನಡೆಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.