ಶಾಹಿ ಜಮಾ ಮಸೀದಿ ಅಧ್ಯಕ್ಷ ಜಾಫರ್ ಅಲಿ ಅವರ ಬಂಧನ ವಿರೋಧಿಸಿ ಉತ್ತರ ಪ್ರದೇಶದ ಸಂಭಲ್ ಸ್ಥಳೀಯ ನ್ಯಾಯಾಲಯದ ಮುಂದೆ ಸೋಮವಾರ ವಕೀಲರು ಪ್ರತಿಭಟನೆ ನಡೆಸಿದರು
ಸಂಭಲ್ (ಉತ್ತರ ಪ್ರದೇಶ): ಜಮಾತ್ ಮಸೀದಿ ನಿರ್ವಹಣೆ ಸಮಿತಿಯ ಅಧ್ಯಕ್ಷ ಜಾಫರ್ ಅಲಿ ಅವರ ಬಂಧನ ವಿರೋಧಿಸಿ ಉತ್ತರ ಪ್ರದೇಶದ ಸಂಭಲ್ ಜಿಲ್ಲೆಯಲ್ಲಿ ಕೆಲವು ವಕೀಲರು ಸೋಮವಾರ ಪ್ರತಿಭಟನೆ ನಡೆಸಿದರು.
ಕಳೆದ ವರ್ಷ ನವೆಂಬರ್ 24ರಂದು ನಡೆದ ಹಿಂಸಾಚಾರ ಪ್ರಕರಣದಲ್ಲಿ ಹಿರಿಯ ವಕೀಲ ಜಾಫರ್ ಅಲಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ನ್ಯಾಯಾಂಗ ಆಯೋಗದ ಮುಂದೆ ಅಲಿ ಅವರು ಹಾಜರಾಗುವುದನ್ನು ತಡೆಯುವ ಯತ್ನದ ಭಾಗವಾಗಿ ಅವರನ್ನು ಬಂಧಿಸಲಾಗಿದೆ ಎಂದು ಪ್ರತಿಭಟನಾನಿರತ ವಕೀಲರು ಆರೋಪಿಸಿದ್ದಾರೆ.
ಕಳೆದ ವರ್ಷ ನಡೆದ ಹಿಂಸಾಚಾರದ ತನಿಖೆಗಾಗಿ ರಾಜ್ಯ ಸರ್ಕಾರವು ಮೂವರು ಸದಸ್ಯರ ನ್ಯಾಯಾಂಗ ಆಯೋಗವನ್ನು ರಚನೆ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.