ಜೈಪುರ: ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯ ಭಾರತ ಮತ್ತು ಪಾಕಿಸ್ತಾನದ ಗಡಿ ಭಾಗದಲ್ಲಿ ಗುರುವಾರ ಡ್ರೋನ್ ಪತ್ತೆಯಾಗಿದೆ ಎಂದು ಪೊಲೀಸ್ ಹಾಗೂ ಭದ್ರತಾ ಪಡೆಗಳ ಅಧಿಕಾರಿಗಳು ತಿಳಿಸಿದರು.
ಬೆಳಿಗ್ಗೆ 9.45ರ ವೇಳೆಗೆ ಗಡಿ ಭಾಗದಲ್ಲಿ ಡ್ರೋನ್ ಪತ್ತೆಯಾಗಿದ್ದು, ತಕ್ಷಣವೇ ಸ್ಥಳಿಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಪತ್ತೆಯಾಗಿರುವ ಡ್ರೋನ್, ಸುಮಾರು 5 ರಿಂದ 7 ಅಡಿ ಉದ್ದವಿದೆ. ಕ್ಯಾಮರಾ ಹೊಂದಿದ್ದು, ಡ್ರೋನ್ ಪತ್ತೆಯಾದಾಗ ಅದು ನಾಶವಾಗಿದೆ ಎಂದು ಬಿಎಸ್‌ಎಫ್ ಅಧಿಕಾರಿಗಳು ತಿಳಿಸಿದರು.
ಡ್ರೋನ್ ವಶಪಡಿಸಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಬಾಂಬ್ ನಿಷ್ಕ್ರಿಯ ದಳವು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದರು.
'ಆಪರೇಷನ್ ಸಿಂಧೂರ' ನಂತರ, ಪಾಕಿಸ್ತಾನವು ಟರ್ಕಿಯಿಂದ ಆಮದು ಮಾಡಿಕೊಂಡಿರುವ ಡ್ರೋನ್‌ಗಳನ್ನು ಉಪಯೋಗಿಸಿ ಭಾರತದ ಮೇಲೆ ದಾಳಿ ಮಾಡುತ್ತಿದ್ದು, ಭಾರತೀಯ ಸೇನೆ ಯಶಸ್ವಿಯಾಗಿ ಡ್ರೋನ್‌ಗಳನ್ನು ಹೊಡೆದುರುಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.