ADVERTISEMENT

ತೀವ್ರಗೊಳ್ಳುತ್ತಿರುವ ರೈತರ ಪ್ರತಿಭಟನೆ; ದೆಹಲಿ ಗಡಿ ಭಾಗಗಳಲ್ಲಿ ಭದ್ರತೆ ಹೆಚ್ಚಳ

ಪಿಟಿಐ
Published 12 ಡಿಸೆಂಬರ್ 2020, 6:34 IST
Last Updated 12 ಡಿಸೆಂಬರ್ 2020, 6:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳು ಜೈಪುರ್ – ದೆಹಲಿ ಮತ್ತು ದೆಹಲಿ –ಆಗ್ರಾ ಎಸ್‌ಪ್ರೆಸ್‌ ಹೈವೇಗಳನ್ನು ಬಂದ್ ಮಾಡುವುದಾಗಿ ಎಚ್ಚರಿಸಿರುವ ಹಿನ್ನೆಲೆಯಲ್ಲಿ ಪೊಲೀಸರು ದೆಹಲಿಯ ಗಡಿಭಾಗಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ 16 ದಿನಗಳಿಂದ ದೆಹಲಿಯ ಗಡಿ ಭಾಗಗಳಲ್ಲಿ ಹೋರಾಟ ನಡೆಸುತ್ತಿರುವ ಸಾವಿರಾರು ರೈತರು, ಇತ್ತೀಚೆಗೆ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಪೊಲೀಸರು ವಿವಿಧ ಹಂತಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕುವ ಜತೆಗೆ, ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಧರಣಿಯಿಂದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾ ಗದಂತೆ ಕ್ರಮ ಕೈಗೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ದೆಹಲಿ ಪ್ರಮುಖ ಗಡಿಭಾಗಗಳಲ್ಲಿ ದೆಹಲಿ ಸಂಚಾರಿ ಪೊಲೀಸ್ ವಿಭಾಗ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಿದೆ. ಕ್ಷಣ ಕ್ಷಣದ ಮಾಹಿತಿಯನ್ನು ಇಲಾಖೆಯ ಟ್ವಿಟ್ಟರ್‌ ಖಾತೆಯಲ್ಲಿ ಅಪ್‌ಲೋಡ್‌ ಮಾಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.