ADVERTISEMENT

ಸಿಂಘು ಗಡಿ; ಹೆಚ್ಚುವರಿ ಸಿಬ್ಬಂದಿ ನಿಯೋಜನೆ ನಿರ್ಧಾರ ಕೈಬಿಟ್ಟ ಪೊಲೀಸರು

ಪಿಟಿಐ
Published 2 ಫೆಬ್ರುವರಿ 2021, 7:51 IST
Last Updated 2 ಫೆಬ್ರುವರಿ 2021, 7:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರಾಜಧಾನಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಬಹುದಾದ ಕಾರಣ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಗಡಿಭಾಗಗಳಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜಿಸುವುದು ಮತ್ತು ಹೆಚ್ಚಿನ ಬ್ಯಾರಿಕೇಡ್‌ ಹಾಕುವುದನ್ನು ಕೈಬಿಡಲು ಪೊಲೀಸರು ನಿರ್ಧರಿಸಿದ್ದಾರೆ.

ಈ ಕುರಿತು ದೆಹಲಿ ಸಂಚಾರಿ ಪೊಲೀಸರು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದು, ದೆಹಲಿ ಗಡಿ ಭಾಗದಲ್ಲಿ ಪ್ರಯಾಣಿಸುವವರು ಪರ್ಯಾಯ ದಾರಿಗಳನ್ನು ಬಳಸುವಂತೆ ತಿಳಿಸಿದ್ದಾರೆ.

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಓಡಾಟವನ್ನು ತಡೆಯಲು ಸಿಂಘು ಗಡಿಯ ಮುಖ್ಯ ಹೆದ್ದಾರಿಯ ನಡುವೆ ಕಾರ್ಮಿಕರು, ಪೊಲೀಸರ ನಿಗಾದಲ್ಲಿ ಕಬ್ಬಿಣದ ಸರಳುಗಳನ್ನು ಹಾಕಲಾಗಿದೆ. ದೆಹಲಿ-ಹರಿಯಾಣ ಗಡಿಯಲ್ಲಿರುವ ಹೆದ್ದಾರಿಯ ಮತ್ತೊಂದು ಭಾಗವನ್ನು ತಾತ್ಕಾಲಿಕ ಸಿಮೆಂಟ್ ಗೋಡೆ ಹಾಕಿ, ಸಂಚಾರವನ್ನು ಪ್ರಾಯೋಗಿಕವಾಗಿ ನಿರ್ಬಂಧಿಸಲಾಗಿದೆ.

ADVERTISEMENT

ಪ್ರತಿಭಟನೆ ನಡೆಯುತ್ತಿರುವ ದೆಹಲಿಯ ಎಲ್ಲ ಗಡಿಭಾಗಗಳಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.