ಮುಂಬೈ: ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳ ಚಲನವಲನ ಕಂಡುಬಂದ ಹಿನ್ನೆಲೆಯಲ್ಲಿ ಉದ್ಯಮಿ ಮುಕೇಶ್ ಅಂಬಾನಿಯವರ ಮುಂಬೈನ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ.
ಬ್ಯಾಗ್ ಹಿಡಿದಿದ್ದ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳು ಅಂಬಾನಿ ಬಗ್ಗೆ ವಿಚಾರಿಸಿದರು ಎಂಬ ಟ್ಯಾಕ್ಸಿ ಚಾಲಕನ ಮಾಹಿತಿ ಆಧರಿಸಿ ಅಂಬಾನಿ ಅವರ ನಿವಾಸ ಆಂಟಿಲಿಯಾಗೆ ಭದ್ರತೆ ಹೆಚ್ಚಿಸಲಾಗಿದೆ.
ಇದೇ ಮಾರ್ಚ್ ತಿಂಗಳಲ್ಲಿ ಸ್ಫೋಟಕ ತುಂಬಿದ್ದ ಎಸ್‌ಯುವಿ ವಾಹನ ಅಂಬಾನಿಯವರ ದಕ್ಷಿಣ ಮುಂಬೈನ ನಿವಾಸದ ಸಮೀಪ ಪತ್ತೆಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.