ADVERTISEMENT

ವಿಧಿ ವಿಜ್ಞಾನ ಪ್ರಯೋಗಾಲಯದ ಹೊರಗೆ ಭದ್ರತೆ ಹೆಚ್ಚಳ

ದೆಹಲಿ ಶ್ರದ್ಧಾ ಹತ್ಯೆ ಪ್ರಕರಣ: ಅಫ್ತಾಬ್‌ಗೆ ಸುಳ್ಳು ಪತ್ತೆ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2022, 5:56 IST
Last Updated 29 ನವೆಂಬರ್ 2022, 5:56 IST
   

ನವದೆಹಲಿ: ದೆಹಲಿ ಶ್ರದ್ಧಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಪತ್ತೆ ಪರೀಕ್ಷೆಗೆ ಒಳಗಾಗಿರುವ ಅಫ್ತಾಬ್‌ ಅಮೀನ್‌ ಪೂನಾವಾಲಾನ ಪರೀಕ್ಷೆ ನಡೆಯುತ್ತಿರುವ ರೋಹಿಣಿಯ ವಿಧಿ ವಿಜ್ಞಾನ ಪ್ರಯೋಗಾಲಯದ ಹೊರಗೆ ಭದ್ರತೆ ಹೆಚ್ಚಿಸಲಾಗಿದೆ.

ಸೋಮವಾರ ವಿಧಿ ವಿಜ್ಞಾನ ಪ್ರಯೋಗಾಲಯದ ಆವರಣ ಹೊರಗೆ ಅಫ್ತಾಬ್‌ ಕುಳಿತ್ತಿದ್ದ ವಾಹನದ ಮೇಲೆ ದಾಳಿ ಯತ್ನ ನಡೆದಿತ್ತು. ಮಂಗಳವಾರವೂ ಪರೀಕ್ಷೆ ಮುಂದುವರಿಯಲಿದ್ದು, ಅದರ ಬೆನ್ನಲ್ಲೇ ಭದ್ರತೆ ಹೆಚ್ಚಿಸಲಾಗಿದೆ. ಸ್ಥಳದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ.

ಸೋಮವಾರ ಅಫ್ತಾಬ್‌ ಕುಳಿತಿರುವ ಪೊಲೀಸ್‌ ವಾಹವನ್ನು ತಡೆದ ಕೆಲವರು ಪೂನಾವಾಲಾ ಮೇಲೆ ದಾಳಿ ನಡೆಸುವ ಯತ್ನ ಮಾಡಿದ್ದರು. ಬಳಿಕ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದರು. ಕುಲದೀಪ್‌ ಮತ್ತು ನಿಗಮ್‌ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.