
ಪಿಟಿಐ
ಶ್ರೀನಗರ: ಇಲ್ಲಿನ ಬಕ್ಷಿ ಕ್ರೀಡಾಂಗಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತಾ ಪಡೆಯು ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟಕಗಳು, ಮದ್ದುಗುಂಡುಗಳು ಮತ್ತು ಶಸ್ತ್ರಾಸ್ತ್ರಗಳ ಪತ್ತೆಗಾಗಿ ಲೋಹ ಶೋಧಕಗಳು ಮತ್ತು ಶ್ವಾನ ದಳಗಳನ್ನು ಬಳಸಿ ಅಮಿರಾ ಕದಲ್ ಮತ್ತು ಮಹಾರಾಜ್ ಬಜಾರ್‌ನ ಕೆಲವು ಜನನಿಬಿಡ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಇಲ್ಲಿಯವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಶ್ಮೀರದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡುವ ಪ್ರಮುಖ ಸ್ಥಳ ಬಕ್ಷಿ ಕ್ರೀಡಾಂಗಣವಾಗಿದ್ದು, ಭದ್ರತೆಯ ದೃಷ್ಟಿಯಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.