ADVERTISEMENT

ಮಣಿಪುರ: ಭದ್ರತಾ ಪಡೆಗಳು -ಉಗ್ರರ ನಡುವೆ ಗುಂಡಿನ ಚಕಮಕಿ

ಪಿಟಿಐ
Published 17 ಜನವರಿ 2024, 4:35 IST
Last Updated 17 ಜನವರಿ 2024, 4:35 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಇಂಫಾಲ್: ಮಣಿಪುರದ ತೆಂಗ್‌ನೌಪಾಲ್ ಜಿಲ್ಲೆಯ ಗಡಿ ನಗರದವಾದ ಮೊರೆಹ್‌ನಲ್ಲಿ ಭದ್ರತಾ ಪಡೆಗಳು ಹಾಗೂ ಶಂಕಿತ ಕುಕಿ ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊರೆಹ್‌ನ ಎಸ್‌ಬಿಐ ಸಮೀಪದಲ್ಲಿರುವ ಭದ್ರತಾ ಪೋಸ್ಟ್‌ ಮೇಲೆ ಉಗ್ರರು ಬಾಂಬ್‌ ಎಸೆದು ಬಳಿಕ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಭದ್ರತಾ ಪಡೆಗಳು ಪ್ರತ್ಯುತ್ತರ ನೀಡಿವೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಈಗ ಸಿಕ್ಕಿರುವ ಮಾಹಿತಿ ಪ್ರಕಾರ, ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಯ ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಬರಬೇಕಷ್ಟೇ.

ಪೊಲೀಸ್‌ ಸಿಬ್ಬಂದಿಗಳನ್ನು ಕೊಲೆ ಮಾಡಿ ಪ್ರಕರಣ ಸಂಬಂಧ ರಾಜ್ಯದ ಪೊಲೀಸರು ಇಬ್ಬರು ಶಂಕಿತ ಕುಕಿ ಉಗ್ರರನ್ನು ಬಂಧಿಸಿದ್ದಾರೆ. ಇದಾದ 48 ಗಂಟೆ ಬಳಿಕ ಈ ಘಟನೆ ನಡೆದಿದೆ.

ಗುಂಡಿನ ದಾಳಿ ನಡೆಯುವುದಕ್ಕೂ ಮುನ್ನ ಮುನ್ನೆಚ್ಚರಿಕಾ ಕ್ರಮವಾಗಿ ಜ.16ರಂದು ಮಧ್ಯರಾತ್ರಿ 12ರಿಂದ ಕರ್ಫ್ಯೂ ವಿಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.