ADVERTISEMENT

ಜಾರ್ಖಂಡ್‌: ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ

ಪಿಟಿಐ
Published 28 ನವೆಂಬರ್ 2020, 5:59 IST
Last Updated 28 ನವೆಂಬರ್ 2020, 5:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಯಿಬಾಸಾ (ಜಾರ್ಖಂಡ್‌): ಇಲ್ಲಿನ ಪಶ್ಚಿಮ ಸಿಂಘ್‌ಭೂಮ್‌ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಮಾನ್ಮರು ಅರಣ್ಯದಲ್ಲಿ ಶುಕ್ರವಾರ ಸಂಜೆ ಪಿಎಲ್‌ಎಫ್‌ಐ ನಕ್ಸಲರು ಮತ್ತು ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಸ್ವಲ್ಪ ಸಮಯದ ಬಳಿಕ ನಕ್ಸಲರು ಕಾಡಿನೊಳಗೆ ಓಡಿ ಹೋದರು ಎಂದು ಹಿರಿಯ ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ನಾಥು ಸಿಂಗ್ ಮೀನಾ ನೇತೃತ್ವದ ಪೊಲೀಸ್ ಪಡೆಯು ಮೊದಲು ನಕ್ಸಲರ ಬೆನ್ನತ್ತಿ ಹೋಯಿತು. ಬಳಿಕ ಇತರ ಪೊಲೀಸ್‌ ಪಡೆ ಮತ್ತು ಭದ್ರತಾ ಪ‍ಡೆಯು ಕಾರ್ಯಾಚರಣೆಯಲ್ಲಿ ಕೈ ಜೋಡಿಸಿತು ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.