ಸಂಭಲ್ (ಉತ್ತರ ಪ್ರದೇಶ): ಬಾಬರಿ ಮಸೀದಿ ಉರುಳಿಸಿದ ವಾರ್ಷಿಕೋತ್ಸವ (ಡಿ. 6) ಹಾಗೂ ಶುಕ್ರವಾರದ ಜುಮಾ ಪ್ರಾರ್ಥನೆಯ ಅಂಗವಾಗಿ, ಮುನ್ನೆಚ್ಚರಿಕೆಯ ಕ್ರಮವಾಗಿ ಸಂಭಲ್‌ನಲ್ಲಿ ಭಾರಿ ಬಿಗಿಬಂದೋಬಸ್ತ್ ಆಯೋಜಿಸಲಾಗಿತ್ತು.
ಸ್ಥಳೀಯ ಮಸೀದಿಗಳಲ್ಲಿಯೇ ಪ್ರಾರ್ಥನೆ ಸಲ್ಲಿಸುವಂತೆ ಹಾಗೂ ತಮ್ಮ ತಮ್ಮ ಪ್ರದೇಶದಲ್ಲಿ ಶಾಂತಿಯನ್ನು ಕಾಪಾಡುವಂತೆ ಧರ್ಮಗುರುಗಳು ಜನರಿಗೆ ಮನವಿ ಮಾಡಿದರು.
‘ಶಾಹಿ ಜಾಮಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಶಾಂತಿಯುತವಾಗಿ ನಡೆಯಿತು. 600 ಜನರು ಭಾಗಿಯಾಗಿದ್ದರು’ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪೆನ್ಸಿಯಾ ಪತ್ರಕರ್ತರಿಗೆ ತಿಳಿಸಿದರು.
ಸಂಭಲ್‌ನ ಕೋಟ್ ಗರ್ವಿ ಪ್ರದೇಶದಲ್ಲಿರುವ ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯಲ್ಲಿ ನ್ಯಾಯಾಲಯದ ಆದೇಶದಂತೆ ಅಧಿಕಾರಿಗಳು ನ. 24ರಂದು ಸಮೀಕ್ಷೆ ನಡೆಸಲು ಮುಂದಾದಾಗ ನಡೆದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಅಂದಿನಿಂದಲೂ ಈ ಪ್ರದೇಶ ಉದ್ವಿಗ್ನವಾಗಿದೆ.
ಡಿಐಜಿ ಜಿ.ಮುನಿರಾಜು ನೇತೃತ್ವದಲ್ಲಿ ಗುರುವಾರ ಸಂಜೆ ಪೊಲೀಸರು ಪಥ ಸಂಚಲನ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.