
ಪಿಟಿಐ
ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಮಂಗಳವಾರ ಗುಂಡಿನ ಚಕಮಕಿ ನಡೆದಿದೆ.
ಇಂದ್ರವತಿ ರಾಷ್ಟ್ರೀಯ ಉದ್ಯಾನದ ಅರಣ್ಯದಲ್ಲಿ ಹಿರಿಯ ನಕ್ಸಲರು ಇರುವ ಬಗ್ಗೆ ದೊರೆತ ಮಾಹಿತಿಯ ಆಧಾರದಲ್ಲಿ ಭದ್ರತಾ ಸಿಬ್ಬಂದಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುಂಡಿನ ಚಕಮಕಿ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.