ADVERTISEMENT

ಬಾಂಬ್‌ ಬೆದರಿಕೆ ಕರೆ: ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ

ಪಿಟಿಐ
Published 28 ಫೆಬ್ರುವರಿ 2021, 11:40 IST
Last Updated 28 ಫೆಬ್ರುವರಿ 2021, 11:40 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕೊಚ್ಚಿ: ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕೊಚ್ಚಿ ಅಂತರರಾಷ್ಟ್ರೀಯವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮಾರ್ಚ್ 1 ರಂದು ಚೆನ್ನೈ ಮತ್ತು ಕೊಚ್ಚಿ ವಿಮಾನ ನಿಲ್ದಾಣಗಳಲ್ಲಿ ಹಾಗೂ ಚೆನ್ನೈಯ ಎಂಜಿಆರ್ ಸೆಂಟ್ರಲ್‌ ರೈಲು ನಿಲ್ದಾಣಗಳಲ್ಲಿ ಬಾಂಬ್ ಇಡಲಾಗುವುದು ಎಂದು ಚೆನ್ನೈ ರೈಲು ನಿಲ್ದಾಣಕ್ಕೆ ಕರೆ ಬಂದಿತ್ತು. ಹೀಗಾಗಿ ಈ ಮೂರೂ ಸ್ಥಳದಲ್ಲಿ ಪೊಲೀಸ್‌ ಮತ್ತು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT