ADVERTISEMENT

ಅಲಿಗಡ ಮುಸ್ಲಿಂ ವಿ.ವಿ. ಇಬ್ಬರು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

ದೇಶವಿರೋಧಿ ಘೋಷಣೆ ಕೂಗಿದ ಆರೋಪ

ಏಜೆನ್ಸೀಸ್
Published 13 ಅಕ್ಟೋಬರ್ 2018, 1:48 IST
Last Updated 13 ಅಕ್ಟೋಬರ್ 2018, 1:48 IST
ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯ
ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯ   

ನವದೆಹಲಿ: ದೇಶ ವಿರೋಧಿ ಘೋಷಣೆಗಳನ್ನು ಕೂಗಿದ ಆರೋಪದಲ್ಲಿ ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದ ಇಬ್ಬರು ಸಂಶೋಧನಾ ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ.

ಜೀವರಸಾಯನ ಶಾಸ್ತ್ರ, ಇತಿಹಾಸ ವಿಷಯಗಳಲ್ಲಿ ಪಿಎಚ್‌ಡಿ ಸಿದ್ಧಪಡಿಸುತ್ತಿರುವ ವಾಸಿಮ್ ಅಯುಬ್ ಮಲಿಕ್ ಮತ್ತು ಅಬ್ದುಲ್ ಹಸೀಬ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಲಿಗಡ ಎಸ್‌ಎಸ್‌ಪಿ ಅಜಯ್ ಕುಮಾರ್ ಸಾಹ್ನಿ ತಿಳಿಸಿದ್ದಾರೆ.

ಗುರುವಾರ ಭದ್ರತಾಪಡೆಗಳ ಎನ್‌ಕೌಂಟರ್‌ನಲ್ಲಿ ಮೃತಪಟ್ಟಹಿಜ್ಬುಲ್‌ ಮುಜಾಹಿದೀನ್‌ ಉಗ್ರ ಮನನ್‌ ಬಷೀರ್‌ ವಾನಿ ಸ್ಮರಣಾರ್ಥ ನಡೆಸಿದ ಸಭೆಯಲ್ಲಿ ಆರೋಪಿಗಳು ದೇಶ ವಿರೋಧಿ ಘೋಷಣೆ ಕೂಗಿದ್ದಾರೆ. ಸಭೆಯ ವಿಡಿಯೊ ಲಭ್ಯವಾಗಿದ್ದು, ಅದರಲ್ಲಿ ಆರೋಪಿಗಳು ದೇಶವಿರೋಧಿ ಘೋಷಣೆ ಕೂಗಿರುವುದು ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಉಗ್ರ ಮನನ್‌ ಬಷೀರ್‌ ವಾನಿಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪಿಎಚ್‌.ಡಿ ಸಂಶೋಧನಾ ವಿದ್ಯಾರ್ಥಿಯಾಗಿದ್ದು, ಈಚೆಗೆ ಉಗ್ರ ಸಂಘಟನೆ ಸೇರಿದ್ದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.