ADVERTISEMENT

ದೇಶದ್ರೋಹ ಪ್ರಕರಣ | ನಿರೀಕ್ಷಣಾ ಜಾಮೀನಿಗೆ ಝಫರುಲ್‌ ಇಸ್ಲಾಂ ಅರ್ಜಿ

ಪಿಟಿಐ
Published 8 ಮೇ 2020, 20:35 IST
Last Updated 8 ಮೇ 2020, 20:35 IST
   

ನವದೆಹಲಿ: ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಝಫರುಲ್‌ ಇಸ್ಲಾಂ ಖಾನ್ ನಿರೀಕ್ಷಣಾ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಮೇ 12ಕ್ಕೆ ವಿಚಾರಣೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದು ಝಫರುಲ್‌ ಇಸ್ಲಾಂ ಪರವಕೀಲೆ ವೃಂದಾ ಗ್ರೋವರ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಪ್ರಕಟಿಸಿದ ಆರೋಪದಲ್ಲಿ ಮೇ 2 ರಂದು ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ADVERTISEMENT

‘ನಾನು ವೃದ್ಧನಾಗಿದ್ದು (72 ವರ್ಷ) ಹೃದ್ರೋಗ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದೇನೆ. ಹೀಗಾಗಿ ಕೊರೊನಾ ಸೋಂಕು ತಗುಲುವ ಸಾಧ್ಯತೆ ಹೆಚ್ಚಿರುವುದರಿಂದ ಜಾಮೀನು ನೀಡಬೇಕು’ ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.