ADVERTISEMENT

ಉತ್ತರ ಪ್ರದೇಶದಲ್ಲಿ ಪಾಕ್‌ ಪರ ಘೋಷಣೆ ಕೂಗಿದ ಮೂವರ ಬಂಧನ: ದೇಶದ್ರೋಹ ಕೇಸು ದಾಖಲು

ಪಿಟಿಐ
Published 29 ಅಕ್ಟೋಬರ್ 2021, 6:17 IST
Last Updated 29 ಅಕ್ಟೋಬರ್ 2021, 6:17 IST
ಸಾಂದ‌ರ್ಭಿಕ ಚಿತ್ರ
ಸಾಂದ‌ರ್ಭಿಕ ಚಿತ್ರ   

ನೋಯ್ಡಾ: ಈದ್‌ ಮಿಲಾದ್‌ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ನೋಯ್ಡಾದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಅಕ್ಟೋಬರ್ 20ರಂದು ನಡೆದ ಮೆರವಣಿಗೆಯಲ್ಲಿ ಈ ಆರೋಪಿಗಳು ಕೂಗಿದ ಘೋಷಣೆಗಳ ವಿಡಿಯೊ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ್ದವು. ಇದನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೊಹಮ್ಮದ್ ಜಾಫರ್, ಸಮೀರ್ ಅಲಿ ಮತ್ತು ಅಲಿ ರಾಜಾ ಅವರನ್ನು ದೇಶದ್ರೋಹದ ಆರೋಪದ ಮೇಲೆ ಬಂಧಿಸಲಾಗಿದೆ. ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಬಲಪಂಥೀಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಒತ್ತಾಯಿಸಿದ್ದರು. ‌ಈ ಮೂವರೂ ಆರೋಪಿಗಳು ನ್ಯಾಯಾಂಗ ವಶದಲ್ಲಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗುವವರ ವಿರುದ್ಧ ದೇಶದ್ರೋಹದ ಕಾನೂನಿನಡಿ ಪ್ರಕರಣ ದಾಖಲಿಸಲಾಗುವುದು ಎಂದು ಗುರುವಾರ ಎಚ್ಚರಿಸಿದ್ದರು.

ಆಗ್ರಾದ ಕಾಲೇಜಿನಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಮೇಲೂ ಉತ್ತರ ಪ್ರದೇಶ ಪೊಲೀಸರು ಗುರುವಾರ ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ.

ಭಾನುವಾರ ನಡೆದ ಟಿ20 ಕ್ರಿಕೆಟ್ ಪಂದ್ಯದಲ್ಲಿ ಭಾರತವನ್ನು ಪಾಕಿಸ್ತಾನ ಸೋಲಿಸಿದ ನಂತರ ಈ ಮೂವರು ಆರೋಪಿಗಳು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ್ದರು ಮತ್ತು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.