ನರೇಂದ್ರ ಮೋದಿ
(ಪಿಟಿಐ ಚಿತ್ರ)
ನವದೆಹಲಿ: 'ಜಾಗತಿಕ ಅನಿಶ್ಚಿತತೆಗಳ ನಡುವೆಯೂ ಪ್ರಸಕ್ತ ಸಾಲಿನ ಮೊದಲ ತ್ರೈಮಾಸಿಕ ಅವಧಿಯಲ್ಲಿ ದೇಶದ ಆರ್ಥಿಕತೆ ನಿರೀಕ್ಷೆಗಿಂತಲೂ ಉತ್ತಮವಾಗಿ ಶೇ 7.8ರ ಬೆಳವಣಿಗೆ ಸಾಧಿಸಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಇಂದು (ಮಂಗಳವಾರ) ಪ್ರತಿಪಾದಿಸಿದ್ದಾರೆ.
'ಸೆಮಿಕಾನ್ ಇಂಡಿಯಾ 2025' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, 'ಸೆಮಿಕಂಡಕ್ಟರ್ ಮಿಷನ್ ಹಾಗೂ ಡಿಎಲ್‌ಐ (ಡಿಸೈನ್-ಲಿಂಕ್ಡ್ ಇನ್ಸೆಂಟೀವ್) ಕಾರ್ಯಕ್ರಮದ ಮುಂದಿನ ಹಂತದತ್ತ ಸರ್ಕಾರ ಕೆಲಸ ನಿರ್ವಹಿಸುತ್ತಿದೆ' ಎಂದು ಹೇಳಿದ್ದಾರೆ.
'ಡಿಜಿಟಲ್ ಮೂಲಸೌಕರ್ಯದ ಬೇಡಿಕೆಗಳನ್ನು ಪೂರೈಸಲು ಭಾರತ ಬದ್ಧವಾಗಿದೆ' ಎಂದು ಅವರು ತಿಳಿಸಿದ್ದಾರೆ.
'ಮುಂದಿನ ದಿನಗಳಲ್ಲಿ ಭಾರತದಲ್ಲಿ ತಯಾರಾದ 'ಮೇಡ್ ಇನ್ ಚಿಪ್'ಗಳು ಜಗತ್ತಿನಲ್ಲಿ ದೊಡ್ಡ ಬದಲಾವಣೆಗಳಿಗೆ ಕಾರಣವಾಗಲಿದೆ. ಆ ದಿನಗಳು ದೂರವಾಗಿಲ್ಲ' ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.
ಭಾರತದ ಮೇಲೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಚ್ಚುವರಿ ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ ಹೆಚ್ಚಿನ ಮಹತ್ವ ಗಿಟ್ಟಿಸಿಕೊಂಡಿದೆ.
'ಸೆಮಿಕಾನ್ ಇಂಡಿಯಾ 2025' ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.