ನನವದೆಹಲಿ: ಉತ್ತರ ಪ್ರದೇಶದಲ್ಲಿ ಭಾರತದ ಎಚ್‌ಸಿಎಲ್ ಮತ್ತು ತೈವಾನ್‌ನ ಫಾಕ್ಸ್‌ಕಾನ್ ಕಂಪನಿಗಳ ಸಹಭಾಗಿತ್ವದ ಸೆಮಿಕಂಡಕ್ಟರ್ ಘಟಕ ಸ್ಥಾಪನೆಗೆ ಕೇಂದ್ರ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.
ಈ ಕುರಿತು ಸಚಿವ ಅಶ್ವಿನಿ ವೈಷ್ಣವ್ ಅವರು ಮಾಹಿತಿ ನೀಡಿದ್ದಾರೆ.
‘₹37 ಶತಕೋಟಿ ಹೂಡಿಕೆಯ ಈ ಘಟಕದಲ್ಲಿ ಮೊಬೈಲ್, ಲ್ಯಾಪ್‌ಟಾಪ್, ಆಟೊಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳಿಗೆ ಡ್ರೈವರ್ ಚಿಪ್‌ಗಳ ಉತ್ಪಾದನೆ ನಡೆಯಲಿದೆ’ ಎಂದು ಅವರು ತಿಳಿಸಿದ್ದಾರೆ.
‘ಉತ್ತರ ಪ್ರದೇಶದಲ್ಲಿ ಸ್ಥಾಪನೆಯಾಗಲಿರುವ ಈ ನೂತನ ಎಚ್‌ಸಿಎಲ್–ಫಾಕ್ಸ್‌ಕಾನ್ ಘಟಕದಲ್ಲಿ ಪ್ರತಿ ತಿಂಗಳು 20 ಸಾವಿರ ಯೂನಿಟ್‌ಗಳು ತಯಾರಾಗಲಿವೆ’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.