ADVERTISEMENT

ಸಂಜಯ್ ರಾವುತ್‌ ವಿರುದ್ಧ ಮಾನನಷ್ಟ ಮೊಕದ್ದಮೆ: ಕೋರ್ಟ್‌ನಿಂದ ಸಮನ್ಸ್‌

ಬಿಜೆಪಿ ಮುಖಂಡ ಕಿರೀಟ್ ಸೋಮಯ್ಯ ಪತ್ನಿ ಮೇಧಾ ಸೋಮಯ್ಯ ದೂರು

ಪಿಟಿಐ
Published 10 ಜೂನ್ 2022, 14:18 IST
Last Updated 10 ಜೂನ್ 2022, 14:18 IST
ಸಂಜಯ್ ರಾವುತ್
ಸಂಜಯ್ ರಾವುತ್   

ಮುಂಬೈ: ಮಹಾರಾಷ್ಟ್ರದ ಬಿಜೆಪಿ ಮುಖಂಡ ಕಿರೀಟ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರ ವಿರುದ್ಧ ಮಾನಹಾನಿಕರಕ ಹೇಳಿಕೆಗಳನ್ನು ನೀಡಿದ ಆರೋಪ ಪ್ರಕರಣದಲ್ಲಿ ಶಿವಸೇನಾದ ಮುಖಂಡ, ಸಂಸದ ಸಂಜಯ್ ರಾವುತ್ ಅವರಿಗೆ ಮುಂಬೈ ಹೈಕೋರ್ಟ್ ಸಮನ್ಸ್ ನೀಡಿದೆ.

ಇಲ್ಲಿನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ (ಸ್ವೀರಿ ಕೋರ್ಟ್) ಪಿ.ಐ. ಮೊಕಾಶಿ ಅವರು ರಾವುತ್ ಅವರಿಗೆ ಗುರುವಾರ ಸಮನ್ಸ್ ಜಾರಿ ಮಾಡಿದ್ದು, ಜುಲೈ 4ರೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

‘ಮೀರಾ ಬಾಯಂಧರ್ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮತ್ತು ನಿರ್ವಹಣೆ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ₹ 100 ಕೋಟಿ ಮೊತ್ತದ ಹಗರಣದಲ್ಲಿ ನನ್ನ ಮತ್ತು ನನ್ನ ಪತಿ ಕಿರೀಟ್ ಸೋಮಯ್ಯ ಅವರ ವಿರುದ್ಧ ಸಂಜಯ್ ರಾವುತ್ ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳನ್ನು ಮಾಡಿದ್ದಾರೆ. ರಾವುತ್ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಗಳು ಮಾನಹಾನಿಕರವಾಗಿದ್ದು, ಸಾರ್ವಜನಿಕರ ದೃಷ್ಟಿಯಲ್ಲಿ ನನ್ನ ಚಾರಿತ್ರ್ಯ ಹದಗೆಡುವಂಥ ಹೇಳಿಕೆಗಳನ್ನು ನೀಡಿದ್ದಾರೆ. ಹಾಗಾಗಿ, ರಾವುತ್ ಅವರ ವಿರುದ್ಧ ನೋಟಿಸ್ ಜಾರಿ ಮಾಡಿ, ವಿಚಾರಣೆ ಕೈಗೊಳ್ಳಬೇಕು’ ಎಂದು ಮೇಧಾ ಸೋಮಯ್ಯ ನ್ಯಾಯಾಲಯಕ್ಕೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT