ADVERTISEMENT

ಕೊರೊನಾ: ತಿಂಗಳ ಸಂಬಳ ನೀಡಿದ ಶಿವಸೇನಾ ಶಾಸಕ, ಸಂಸದರು

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2020, 0:18 IST
Last Updated 28 ಮಾರ್ಚ್ 2020, 0:18 IST

ಮುಂಬೈ(ಪಿಟಿಐ): ‘ಕೊರೊನಾ ವೈರಸ್‌ ಸೋಂಕು ನಿಯಂತ್ರಣ ಕ್ರಮಗಳಿಗಾಗಿ ಪಕ್ಷದ ಸಂಸದರು ಮತ್ತು ಶಾಸಕರು ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಿದ್ದಾರೆ’ ಎಂದು ಶಿವಸೇನಾ ಮುಖಂಡ ಸಂಜಯ್‌ ರಾವತ್‌ ಶುಕ್ರವಾರ ಹೇಳಿದ್ದಾರೆ.

‘ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನೇತೃತ್ವದಲ್ಲಿ ಖಂಡಿತವಾಗಿಯೂ ನಾವು ಈ ಯುದ್ಧ ಗೆಲ್ಲುತ್ತೇವೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.ಕೊರೊನಾ ಸೋಂಕಿನ ಕಡಿವಾಣಕ್ಕೆ‌ಸಂಸದರು ಮತ್ತು ಶಾಸಕರು ತಿಂಗಳ ವೇತನ ನೀಡುವುದಾಗಿ ಗುರುವಾರ ಎನ್‌ಸಿಪಿ ಘೋಷಿಸಿತ್ತು. ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಅವರು ತಿಂಗಳ ಸಂಬಳ ನೀಡುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT